ಕಡಬ: ಶಾಲೆಯಲ್ಲಿ ಅಡುಗೆ ತಯಾರಿಯ ವೇಳೆ ಗ್ಯಾಸ್ ಸೋರಿಕೆ ➤ ಅಡುಗೆ ಸಿಬ್ಬಂದಿಗಳ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ

(ನ್ಯೂಸ್ ಕಡಬ) Newskadaba.com ಕಡಬ, ಅ. 25. ಶಾಲೆಯಲ್ಲಿ ಅಡುಗೆ ಮಾಡುವ ಸಂದರ್ಭ ಗ್ಯಾಸ್ ಸೋರಿಕೆಯುಂಟಾಗಿ ಬೆಂಕಿ ಹೊತ್ತಿದ ಘಟನೆ ನೂಜಿಬಾಳ್ತಿಲ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರದಂದು ನಡೆದಿದೆ.

ತಕ್ಷಣವೇ ಸ್ಥಳದಲ್ಲಿದ್ದವರು ಕಾರ್ಯಪ್ರವೃತ್ತರಾದ ಹಿನ್ನೆಲೆ ಬಾರೀ ದುರಂತ ತಪ್ಪಿದಂತಾಗಿದೆ. ಕೊರೋನಾ ಹಿನ್ನೆಲೆ ಸೋಮವಾರದಿಂದ ರಾಜ್ಯಾದ್ಯಂತ ಶಾಲೆಗಳು ಆರಂಭವಾಗಿದೆ. ಎಲ್ಲಾ ಶಾಲೆಗಳಂತೆ ನೂಜಿಬಾಳ್ತಿಲ ಶಾಲೆಯಲ್ಲೂ ಸೋಮವಾರ ಅಡುಗೆ ಮಾಡುವ ಕೊಠಡಿಯಲ್ಲಿ ಗ್ಯಾಸ್ ಉರಿಸುವ ಸಂದರ್ಭ ಗ್ಯಾಸ್ ಸೋರಿಕೆಯಾಗಿ ಬೆಂಕಿ ತಗುಲಿದೆ. ತಕ್ಷಣವೇ ಅಡುಗೆ ಸಿಬ್ಬಂದಿಗಳು ಹಾಗೂ ಸ್ಥಳೀಯರು ಉಪಕರಣದ ಸಹಾಯದಿಂದ ಬೆಂಕಿ ನಂದಿಸಿ, ಹೆಚ್ಚಿನ ಅಪಾಯ ಸಂಭವಿಸದಂತೆ ಮಾಡಿದರು. ಸ್ಥಳಕ್ಕೆ ಶಿಕ್ಷಕರು, ಎಸ್.ಡಿ.ಎಂ.ಸಿ. ಸಮಿತಿ, ಪೋಷಕರು, ನೂಜಿಬಾಳ್ತಿಲ ಗ್ರಾ.ಪಂ. ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!

Join the Group

Join WhatsApp Group