ವ್ಯಾಯಾಮದ ನೆಪದಲ್ಲಿ ಅಸಭ್ಯ ವರ್ತನೆ ಆರೋಪ ➤ ದೈಹಿಕ ಶಿಕ್ಷಣ ನಿರ್ದೇಶಕ ಅರೆಸ್ಟ್

(ನ್ಯೂಸ್ ಕಡಬ) Newskadaba.com ಪುತ್ತೂರು, ಅ. 26. ವ್ಯಾಯಾಮದ ನೆಪದಲ್ಲಿ ವಿದ್ಯಾರ್ಥಿನಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ, ಯುವತಿಯ ತಾಯಿಯು ನೀಡಿದ ದೂರಿನನ್ವಯ ಪೋಕ್ಸೋ ಕಾಯ್ದೆಯಡಿ ಪುತ್ತೂರಿನ ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕನನ್ನು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಪುತ್ತೂರಿನ ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಕೊಂಬೆಟ್ಟು ನಿವಾಸಿ ಎಲ್ಯಾಸ್ ಪಿಂಟೋ ಎಂದು ಗುರುತಿಸಲಾಗಿದೆ. ಈತ ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿದ್ದ ಮಡಿಕೇರಿ ಮೂಲದ ಅಪ್ರಾಪ್ತ ವಿದ್ಯಾರ್ಥಿನಿಗೆ ಅ.23ರಂದು ಲೈಂಗಿಕ ಕಿರುಕುಳ ನೀಡಿದ್ದು, ಆಕೆ ಈ ವಿಚಾರವನ್ನು ತನ್ನ ಪೋಷಕರಿಗೆ ತಿಳಿಸಿದ್ದಳು. ಆಕೆಯ ಪೋಷಕರು ಸಂಸ್ಥೆಗೆ ಬಂದು ಆಕೆಯನ್ನು ವಿಚಾರಿಸಿ ಬಳಿಕ ಘಟನೆಯ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನಂತೆ ದೈಹಿಕ ಶಿಕ್ಷಣ ನಿರ್ದೇಶಕನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Also Read  ಅಕ್ರಮ ಸಂಬಂಧ ಹಿನ್ನೆಲೆ ಪ್ರಕರಣ..!   ಆಟೋ ಚಾಲಕನ ಮೇಲೆ ಚಾಕುವಿನಿಂದ ಹಲ್ಲೆ..!

error: Content is protected !!
Scroll to Top