ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ಬಳಿಕ ತಾಯಿ ಆತ್ಮಹತ್ಯೆ

(ನ್ಯೂಸ್ ಕಡಬ) Newskadaba.com ಕಲಬುರಗಿ, ಅ. 26. ಇಬ್ಬರು ಮಕ್ಕಳಿಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಬಳಿಕ ತಾಯಿ ಕೂಡಾ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಪಂಚಶೀಲ ನಗರದಲ್ಲಿ ನಡೆದಿದೆ.

ಘಟನೆಯಲ್ಲಿ ತಾಯಿ ದೀಕ್ಷಾ (26) ಹಾಗೂ ಮಗಳು ಸಿಂಚನ (2) ಮೃತಪಟ್ಟರೆ, ಇನ್ನೋರ್ವ ಮಗ ಧನಂಜಯ (3) ಸಾವು ಬದುಕಿನ ನಡುವೆ ಆಸ್ಪತ್ರೆಯಲ್ಲಿ ಹೋರಾಟ ನಡೆಸುತ್ತಿದ್ದಾನೆ ಎನ್ನಲಾಗಿದೆ. ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚುವಾಗ ಮಕ್ಕಳಿಬ್ಬರು ತಪ್ಪಿಸಿಕೊಳ್ಳಲು ಮುಂದಾಗಿದ್ದು, ಈ ವೇಳೆ ಆಟಿಕೆ ವಸ್ತುಗಳನ್ನು ಕಟ್ಟಿ ಹಾಕಿ ಬೆಂಕಿ ಹಚ್ಚಿ, ಬಳಿಕ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಕುರಿತು ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top