ಬೆಳ್ತಂಗಡಿ: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಹಿನ್ನೆಲೆ ➤ ಆರೋಪಿ ವಿರುದ್ದ ದೂರು ದಾಖಲು



(ನ್ಯೂಸ್ ಕಡಬ) Newskadaba.com ಬೆಳ್ತಂಗಡಿ, ಅ. 26. ಶಾಲಾ ವಿದ್ಯಾರ್ಥಿನಿಯೋರ್ವಳಿಗೆ ದೂರವಾಣಿ ಕರೆಯ ಮೂಲಕ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯ ವಿರುದ್ದ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







ಆರೋಪಿಯನ್ನು ದಿಲೀಪ್ ಮದ್ದಡ್ಕ ಎಂದು ಗುರುತಿಸಲಾಗಿದೆ. ಈತ ಒಂಭತ್ತನೇ ತರಗತಿಯ ಬಾಲಕಿಯನ್ನು ಪರಿಚಯ ಮಾಡಿ, ಆನ್ಲೈನ್ ತರಗತಿಗೆಂದು ಬಾಲಕಿಯ ಜೊತೆಗಿದ್ದ ಮೊಬೈಲ್ ನಂಬರ್ ಪಡೆದು, ಕಳೆದ ಕೆಲ ತಿಂಗಳುಗಳಿಂದ ಆಕೆಗೆ ಕಿರುಕುಳ ನೀಡುತ್ತಿದ್ದ. ಅಲ್ಲದೇ ವಾಟ್ಸಾಪ್ ಮೂಲಕ ಅಶ್ಲೀಲ ಚಿತ್ರಗಳು ಹಾಗೂ ಕೆಟ್ಟ ಮೆಸೇಜ್ ಗಳನ್ನು ಕಳುಹಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂದು ವಿದ್ಯಾರ್ಥಿನಿ ದೂರು ನೀಡಿದ್ದಾಳೆ. ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.






 

error: Content is protected !!
Scroll to Top