ಬಂಟ್ವಾಳ: ಬಿಜೆಪಿ ಮುಖಂಡನ ಮನೆಗೆ ಭಜರಂಗದಳ ಕಾರ್ಯಕರ್ತರಿಂದ ದಾಳಿ

(ನ್ಯೂಸ್ ಕಡಬ) Newskadaba.com ಬಂಟ್ವಾಳ, ಅ. 27. ಬಿಜೆಪಿ ಮುಖಂಡನ ಮೇಲೆ ಬಜರಂಗದಳದ ಕಾರ್ಯಕರ್ತರು ತಲವಾರಿನಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ.


ಬಜರಂಗದಳ ಕಾರ್ಯಕರ್ತರಾದ ನಿತಿನ್, ಪವನ್ ಹಾಗೂ ನಿಶಾಂತ್ ಎಂಬವರು ಬಿಜೆಪಿ ಅಮ್ಟಾಡಿ ಕೇಂದ್ರ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಬೊಳ್ಳೂರು ಅವರ ಮನೆಗೆ ನುಗ್ಗಿ ಮಾರಕಾಸ್ತ್ರದಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ದುಷ್ಕರ್ಮಿಗಳು ಪ್ರಕಾಶ್ ಅವರ ತಾಯಿ ಮತ್ತು ಅಣ್ಣನಿಗೆ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

Also Read  ನಮ್ಮಬದುಕನ್ನು ಆತ್ಮ ನಿರ್ಭರಗೊಳಿಸಬೇಕು ➤ ಉದ್ಯೋಗ ನೈಪುಣ್ಯ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಕೋಟ ಶ್ರೀನಿವಾಸ್ ಪೂಜಾರಿ

error: Content is protected !!
Scroll to Top