ಮನೆ ಬಿಟ್ಟು ತೆರಳಿದ್ದ ವ್ಯಕ್ತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) Newskadaba.com ಉಪ್ಪಿನಂಗಡಿ, ಅ. 27. ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ರಾಮಣ್ಣ ಪೂಜಾರಿ ಎಂದು ಗುರುತಿಸಲಾಗಿದೆ. ಇವರು ಕೆಲವು ದಿನಗಳ ಹಿಂದೆಮನೆ ಬಿಟ್ಟು ಹೋಗಿದ್ದು, ಇಂದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!

Join the Group

Join WhatsApp Group