(ನ್ಯೂಸ್ ಕಡಬ) Newskadaba.com ಮಂಗಳೂರು, ಅ. 27. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಮಹಾನಗರ ಪಾಲಿಕೆ ಆಯುಕ್ತ ಸೇರಿದಂತೆ ಹಲವು ಅಧಿಕಾರಿಗಳಿಗೆ ಲೋಕಾಯುಕ್ತವು ನೊಟೀಸ್ ಜಾರಿಗೊಳಿಸಿದೆ.
ನಗರದ ಹೊರವಲಯದ ಜೋಕಟ್ಟೆಯಲ್ಲಿ ಕೈಗಾರಿಕಾ ಸಂಸ್ಥೆಯಿಂದ ಹೊಳೆ ಮತ್ತು ಫಲ್ಗುಣಿ ನದಿಗೆ ತ್ಯಾಜ್ಯ ನೀರು ಸೇರುತ್ತಿರುವುದರ ಕುರಿತು ಸ್ವಯಂ ದೂರು ದಾಖಲಿಸಿಕೊಂಡಿರುವ ಲೋಕಾಯುಕ್ತ ಇಲಾಖೆಯು ಜಲಮೂಲ ಕಲುಷಿತಗೊಳ್ಳುತ್ತಿರುವ ಬಗ್ಗೆ ವಸ್ತು ಸ್ಥಿತಿಯ ವರದಿ ಮತ್ತು ಅದರ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮದ ಬಗ್ಗೆ ನವೆಂಬರ್ 2ರ ಒಳಗಾಗಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ, ಮಹಾನಗರ ಪಾಲಿಕೆ ಆಯುಕ್ತ, ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಹಾಗೂ ಕಾರ್ಯದರ್ಶಿ, ಮಂಗಳೂರು ತಹಶೀಲ್ದಾರ್, ಕೆಎಸ್‌ಪಿಸಿಬಿಯ ಹಿರಿಯ ಪರಿಸರ ಅಧಿಕಾರಿ ಹಾಗೂ ಎಂಆರ್‌ಪಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಿದೆ.