ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ ➤ ಬಾಲಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) Newskadaba.com ಕಾಸರಗೋಡು, ಅ. 27. ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ಕಾಞಂಗಾಡ್ ನ ಅತಿಂಞಾಲ್ ಎಂಬಲ್ಲಿ ನಡೆದಿದೆ.

ಮೃತ ಬಾಲಕನನ್ನು ಚುಳ್ಳಿಕೆರೆಯ ಬಿಜು ಎಂಬವರ ಪುತ್ರ ಆಶಿಲ್(15) ಎಂದು ಗುರುತಿಸಲಾಗಿದೆ. ಈತ ಮನೆ ಸಮೀಪದ ಅಂಗಡಿಗೆ ತೆರಳಲು ರಸ್ತೆ ದಾಟುತ್ತಿದ್ದಾಗ ವೇಗದಿಂದ ಬಂದ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬಾಲಕ ರಸ್ತೆಗೆಸೆಯಲ್ಪಟ್ಟಿದ್ದು, ಈ ಸಂದರ್ಭ ಬಂದ ಗೂಡ್ಸ್ ಆಟೋ ಆತನ ದೇಹದ ಮೆಲೆಯೇ ಹರಿದಿದೆ. ತಕ್ಷಣ ಬಾಲಕನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ.

Also Read  15ರ ಬಾಲಕನಿಗೆ ಸರ್ಪಕಾಟ - ಎರಡು ತಿಂಗಳ ಅವಧಿಯಲ್ಲಿ 9 ಬಾರಿ ಕಚ್ಚಿದ ನಾಗಪ್ಪ

error: Content is protected !!
Scroll to Top