ನೆಲ್ಯಾಡಿ: ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಢಿಕ್ಕಿ ➤ ಪೊಲೀಸ್ ಸಿಬ್ಬಂದಿಗೆ ಗಾಯ

(ನ್ಯೂಸ್ ಕಡಬ) Newskadaba.com ನೆಲ್ಯಾಡಿ, ಅ. 27. ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಪೊಲೀಸ್ ಸಿಬ್ಬಂದಿ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಬುಧವಾರದಂದು ನಡೆದಿದೆ.


ಗಾಯಗೊಂಡವರನ್ನು ಬೈಕ್ ಸವಾರ ಪೊಲೀಸ್ ಸಿಬ್ಬಂದಿ ಸಿದ್ದಪ್ಪ ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನಲ್ಲಿ ಪೊಲೀಸ್ ಸಿಬ್ಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇಂದು ಬೆಳಗ್ಗೆ ಹಾಸನಕ್ಕೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಕಾರು ನಡುವೆ ಪರಸ್ಪರ ಡಿಕ್ಕಿ ಹೊಡೆದಿದೆ. ಗಾಯಾಳುವನ್ನು ಹಾಸನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

Also Read  ಮಂಗಳೂರು : ಮೀನು ಮಾರುಕಟ್ಟೆಯಲ್ಲಿ ಆಟಿಕೆಯ ನೋಟು ನೀಡಿ ವಂಚನೆ

error: Content is protected !!
Scroll to Top