ನಂದಿನಿ ಉತ್ಪನ್ನಗಳನ್ನು ನಿಗದಿತ ದರಕ್ಕಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದ್ದಲ್ಲಿ ಡೀಲರ್ ಶಿಪ್ ಕ್ಯಾನ್ಸಲ್ ➤ ದ.ಕ ಹಾಲು ಉತ್ಪಾದಕರ ಒಕ್ಕೂಟದ ಆದೇಶ

(ನ್ಯೂಸ್ ಕಡಬ) Newskadaba.com ಪುತ್ತೂರು, ಅ. 27. ನಂದಿನಿ ಉತ್ಮನ್ನಗಳ ಡೀಲರುಗಳು ನಂದಿನಿ ಹಾಲು ಮತ್ತು ಉತ್ಪನ್ನಗಳನ್ನು ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುವುದು ಕಂಡು ಬಂದಲ್ಲಿ ಡೀಲರ್‌ಶಿಪ್ ರದ್ದುಗೊಳಿಸಲಾಗುವುದು ಎಂದು ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಮಾರುಕಟ್ಟೆ ವ್ಯವಸ್ಥಾಪಕರು ಆದೇಶಿಸಿದ್ದಾರೆ.

ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಗರಿಷ್ಟ ಮಾರಾಟ ಮಾಡುವ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುವುದು ಒಕ್ಕೂಟದೊಂದಿಗೆ ಮಾಡಿಕೊಂಡ ಒಪ್ಪಂದಕ್ಕೆ ವಿರುದ್ದವಾಗಿರುತ್ತದೆ. ಆದ್ದರಿಂದ ಕಾನೂನು ಮಾಪನ ಶಾಸ್ತ್ರದ ನಿಯಮದ ಪ್ರಕಾರ ಗ್ರಾಹಕರಿಗೆ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಗರಿಷ್ಟ ದರದಲ್ಲಿ ಮಾರಾಟ ಮಾಡಬೇಕು ತಪ್ಪಿದ್ದಲ್ಲಿ ಯಾವುದೇ ಮುನ್ಸೂಚನೆ ಇಲ್ಲದೇ ಡೀಲರ್‌ಶಿಪ್ ರದ್ದುಪಡಿಸಲಾಗುವುದು ಎಂದು ತಿಳಿಸಿದ್ದಾರೆ.

Also Read  ಮಂಗಳೂರು : ಶ್ರೀನಿವಾಸ್‌ ವಿಶ್ವವಿದ್ಯಾಲಯದಲ್ಲಿ ಮಾಹಿತಿ ಕಾರ್ಯಗಾರ

error: Content is protected !!
Scroll to Top