(ನ್ಯೂಸ್ ಕಡಬ) Newskadaba.com ಪುತ್ತೂರು, ಅ. 28. ಮದರಸ ವಿದ್ಯಾರ್ಥಿಯೋರ್ವ ಕೆಸರು ತುಂಬಿದ ನೀರಿಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ತಾಲೂಕಿನ ಮಾಡನ್ನೂರಿನಲ್ಲಿ ನಡೆದಿದೆ.
ವಿದ್ಯಾರ್ಥಿಗಳೆಲ್ಲ ಕೊಳದ ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಓರ್ವ ಬಾಲಕ ಆಯತಪ್ಪಿ ಕೆಸರು ತುಂಬಿದ ನೀರಿಗೆ ಬಿದ್ದಿದ್ದು, ತುಂಬಾ ಹೊತ್ತಾದರೂ ಹೊರಬರಲಾರದೆ ಕೆಸರು ನೀರಿನಲ್ಲಿ ಬಾಕಿಯಾಗಿದ್ದ ಎಂದು ತಿಳಿದುಬಂದಿದೆ. ಗಂಭೀರ ಗಾಯಗೊಂಡ ವಿಧ್ಯಾರ್ಥಿಯನ್ನು ಪುತ್ತೂರಿನಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕೊಂಡೊಯ್ಯಲಾಗಿದೆ.