ಮಂಗಳೂರು: ಪಬ್ ಗಳಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಹಿನ್ನೆಲೆ ➤ ನಗರದ ಪಬ್ ಗಳ ಮೇಲೆ ದಿಢೀರ್ ಪೊಲೀಸ್ ದಾಳಿ

(ನ್ಯೂಸ್ ಕಡಬ) Newskadaba.com ಮಂಗಳೂರು, ಅ. 29. ಪಬ್ ಗಳು ಕೋವಿಡ್ ನಿಯಮಗಳನ್ನು ಮೀರಿ ಕಾರ್ಯನಿರ್ವಹಿಸುತ್ತಿವೆ ಎಂಬ ಆರೋಪದ ಹಿನ್ನೆಲೆ ನಗರದಲ್ಲಿರುವ ಪಬ್‌ಗಳಿಗೆ ಗುರುವಾರ ರಾತ್ರಿ ವೇಳೆ ಪೊಲೀಸರು ಹಠಾತ್ ದಾಳಿ ಮಾಡಿ ತಪಾಸಣೆ ನಡೆಸಿದ್ದಾರೆ.


ಪಬ್‌ಗಳು ಕೋವಿಡ್ ನಿಯಮವನ್ನು ಪಾಲನೆ ಮಾಡುತ್ತಿಲ್ಲ, ಪಬ್‌ನೊಳಗೆ ಬಲ್ಬ್ ವ್ಯವಸ್ಥೆ ಸೇರಿದಂತೆ ಕೆಲವೊಂದು ನಿಯಮಗಳನ್ನು ಗಾಳಿಗೆ ತೂರಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಕೇಳಿ ಬಂದ ಆರೋಪದ ಮೇರೆಗೆ ಪೊಲೀಸರು ದಿಢೀರ್ ದಾಳಿ ಮಾಡಿ ತಪಾಸಣೆ ನಡೆಸಿದ್ದು, ಪಬ್ ಮೇಲ್ವಿಚಾರಕ ಹಾಗೂ ಸಿಬ್ಬಂದಿಗಳಿಗೆ ಕೆಲವೊಂದು ಖಡಕ್ ವಾರ್ನಿಂಗ್ ನೀಡಿದ್ದಾರೆಂದು ತಿಳಿದು ಬಂದಿದೆ.

Also Read  ಸಿ.ಎಫ್.ಟಿ.ಆರ್.ಐ ಆವರಣದಲ್ಲಿ ಚಿರತೆ ಪ್ರತ್ಯಕ್ಷ..!!        ➤ ಸ್ಥಳೀಯರಲ್ಲಿ ಹೆಚ್ಚಿದ ಆತಂಕ     

error: Content is protected !!
Scroll to Top