ಖಾಸಗಿ ಬಸ್ ಹಾಗೂ ಆಟೋ ರಿಕ್ಷಾ ನಡುವೆ ಢಿಕ್ಕಿ ➤ ಇಬ್ಬರಿಗೆ ಗಾಯ



(ನ್ಯೂಸ್ ಕಡಬ) Newskadaba.com ಬಂಟ್ವಾಳ,‌ ಅ. 29. ಖಾಸಗಿ ಬಸ್ ಹಾಗೂ ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಆಟೋ ಚಾಲಕ ಹಾಗೂ ಸಹಪ್ರಯಾಣಿಕ ಗಾಯಗೊಂಡ ಘಟನೆ ಬಿ ಸಿ ರೋಡು ಸಮೀಪದ ಪೊಳಲಿ ರಸ್ತೆಯ ಕಲ್ಪನೆ ಎಂಬಲ್ಲಿ ನಡೆದಿದೆ.







ಗಾಯಗೊಂಡವರನ್ನು ನೇರಳಕಟ್ಟೆ ನಿವಾಸಿ ಮುಹಮ್ಮದ್ ನಿಹಾಲ್ ಹಾಗೂ ಸಹ ಪ್ರಯಾಣಿಕ ಮುಹಮ್ಮದ್ ಹನೀಫ್ ಎಂದು ಗುರುತಿಸಲಾಗಿದೆ. ಪೊಳಲಿಯಿಂದ ಬಿ ಸಿ ರೋಡ್ ಕಡೆ ಬರುತ್ತಿದ್ದ ಖಾಸಗಿ ಬಸ್ ಹಾಗೂ ಬಿ.ಸಿ.ರೋಡಿನಿಂದ ಅಡ್ಡೂರು ಕಡೆ ತೆರಳುತ್ತಿದ್ದ ಆಟೋ ರಿಕ್ಷಾ ನಡುವೆ ತೆಂಕಬೆಳ್ಳೂರು ಗ್ರಾಮದ ಕಲ್ಪನೆ ಬಳಿ ಮುಖಾಮುಖಿ ಢಿಕ್ಕಿಯಾಗಿದೆ. ಘಟನೆಯಲ್ಲಿ ರಿಕ್ಷಾದಲ್ಲಿದ್ದ ಇಬ್ಬರು ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಬಂಟ್ವಾಳ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






error: Content is protected !!
Scroll to Top