ಖ್ಯಾತನಟ ಪುನೀತ್ ರಾಜ್‍ಕುಮಾರ್ ಗೆ ಹೃದಯಾಘಾತ ➤ ಆರೋಗ್ಯ ಸ್ಥಿತಿ ಚಿಂತಾಜನಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.29. ಕನ್ನಡದ ಖ್ಯಾತ ನಟ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಹೃದಾಯಾಘಾತ ಸಂಭವಿಸಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

ಇಂದು ಪುನೀತ ರಾಜ್‍ಕುಮಾರ್ ಗೆ ಹೃದಯಾಘಾತವಾಗಿದ್ದು, ತಕ್ಷಣವೇ ನಗರದ ವಿಕ್ರಮ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪುನೀತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಈಗಲೇ ಏನೂ ಹೇಳಲಾಗದು ಎಂದು ವೈದ್ಯರು ತಿಳಿಸಿದ್ದಾರೆ. ಈ ನಡುವೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತನ್ನ ಪ್ರವಾಸವನ್ನು ಮೊಟಕುಗೊಳಿಸಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಚಿತ್ರನಟರು ಆಸ್ಪತ್ರೆಗೆ ಭೇಟಿ ನೀಡಿದ್ದು, ಆಸ್ಪತ್ರೆಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.

Also Read  ಅಕ್ರಮ ಜಾನುವಾರು ಸಾಗಾಟ ➤‌ ವಾಹನ, ಗೋವು ಸಹಿತ ಆರೋಪಿ ವಶಕ್ಕೆ

 

 

 

error: Content is protected !!
Scroll to Top