ಅಭಿಮಾನಿಗಳ ಒತ್ತಾಯದ ಹಿನ್ನೆಲೆ ➤ ‘ಅಪ್ಪು’ ಅಂತ್ಯಕ್ರಿಯೆ ನಾಳೆಗೆ ಮುಂದೂಡಿಕೆ

(ನ್ಯೂಸ್ ಕಡಬ) Newskadaba.com ಬೆಂಗಳೂರು, ಅ. 30. ಸ್ಯಾಂಡಲ್​ವುಡ್​ ಪವರ್‌ ಸ್ಟಾರ್ ಪುನೀತ್​ ರಾಜ್​ಕುಮಾರ್​ ರವರು ಶುಕ್ರವಾರದಂದು ವಿಧಿವಶರಾಗಿದ್ದು, ಅವರ ಅಂತ್ಯಕ್ರಿಯೆ ನಾಳೆ (ಭಾನುವಾರ) ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಹೇಳಿದ್ದಾರೆ.

ಯುವರತ್ನ ಪುನೀತ್ ರಾಜ್ ಕುಮಾರ್ ಅವರ ಲಕ್ಷಾಂತರ ಅಭಿಮಾನಿಗಳು ಆಗಮಿಸುತ್ತಿರುವ ಹಿನ್ನೆಲೆ ನಾಳೆಯವರೆಗೂ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಅಪ್ಪು ಅವರ ಹಿರಿಯ ಪುತ್ರಿ ಧೃತಿ ನ್ಯೂಯಾರ್ಕ್​​ನಿಂದ ದೆಹಲಿಗೆ ಆಗಮಿಸಿದ್ದು, ಅವರು ಸಂಜೆ 4:15ರ ಸುಮಾರಿಗೆ ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲಿದ್ದಾರೆ. ಅಲ್ಲಿಂದ ನೇರವಾಗಿ ತಂದೆಯ ಪಾರ್ಥಿವ ಶರೀರ ನೋಡಲು ಕಂಠೀರವ ಸ್ಟೇಡಿಯಂಗೆ ಬರಲಿದ್ದಾರೆ. ಹೀಗಾಗಿ ರಾತ್ರಿ ಸಮಯದಲ್ಲಿ ಅಂತ್ಯಕ್ರಿಯೆ ಮಾಡುವುದು ಬೇಡ ಎನ್ನುವ ರಾಜ್‌ಕುಮಾರ್‌ ಕುಟುಂಬಸ್ಥರ ಸಲಹೆ ಮೇರೆಗೆ ಸಿಎಂ ಬೊಮ್ಮಾಯಿ ನಾಳೆ ಅಂತ್ಯಕ್ರಿಯೆ ನಡೆಸುವ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

Also Read  ಗಾಂಜಾ ಮತ್ತಿನಲ್ಲಿ ಕಾರು ಚಲಾಯಿಸಿ ಸ್ಕೂಟರ್‌ಗೆ ಡಿಕ್ಕಿ ➤ ಸ್ಕೂಟರ್‌ ಸವಾರ ಮೃತ್ಯು

error: Content is protected !!
Scroll to Top