ದುಬೈಯಿಂದ ಮಂಗಳೂರಿಗೆ ಅಕ್ರಮ ಚಿನ್ನ ಸಾಗಾಟ ➤ ಆರೋಪಿ ಅಂದರ್

(ನ್ಯೂಸ್ ಕಡಬ) Newskadaba.com ಮಂಗಳೂರು, ಅ. 30. ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆ ಹಚ್ಚಿರುವ ಅಧಿಕಾರಿಗಳು, 32,55,330 ರೂ. ವೌಲ್ಯದ 663 ಗ್ರಾಂ ಚಿನ್ನ ವಶಪಡಿಸಿಕೊಂಡ ಘಟನೆ ನಡೆದಿದೆ.

ದುಬೈಯಿಂದ ಮಂಗಳೂರಿಗೆ ಆಗಮಿಸಿದ ಪ್ರಯಾಣಿಕನೋರ್ವ ಚಿನ್ನವನ್ನು ಅಕ್ರಮವಾಗಿ ಸಾಗಾಟ ನಡೆಸುತ್ತಿರುವುದು ಕಂಡುಬಂದಿದ್ದು, ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿ ವಶಕ್ಕೆ ಪಡೆದು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

Scroll to Top