ಕಣ್ಣು ದಾನಗೈಯ್ಯುವ ಮೂಲಕ ಇಬ್ಬರ ಬಾಳಿಗೆ ಬೆಳಕಾದ “ಯುವರತ್ನ” ➤ ಶಸ್ತ್ರಚಿಕಿತ್ಸೆ ಚಿಕಿತ್ಸೆ ಯಶಸ್ವಿ

(ನ್ಯೂಸ್ ಕಡಬ) Newskadaba.com ಬೆಂಗಳೂರು, ನ. 01. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರ ಅಕಾಲಿಕ ನಿಧನದಿಂದಾಗಿ ಇಡೀ ಕರುನಾಡು ಸೂತಕದ ಛಾಯೆಯಿಂದ ಕೂಡಿದ್ದು, ಕೋಟ್ಯಾಂತರ ಅಭಿಮಾನಿಗಳು ಅಪ್ಪು ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಕೆಲ ಅಭಿಮಾನಿಗಳಿಗೆ ಸಾವಿನ ಸುದ್ದಿ ಅರಗಿಸಿಕೊಳ್ಳಲಾಗದೆ ಹೃದಯಾಘಾತವಾಗಿದೆ.


ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲದೇ ಹೊರ ರಾಜ್ಯ ಹಾಗೂ ಹೊರ ದೇಶಗಳಲ್ಲೂ ಪುನೀತ್ ಅವರು ಅಭಿಮಾನಿಗಳನ್ನು ಹೊಂದಿದ್ದಾರೆ. ಇದೀಗ ಅಪ್ಪಾಜಿ ಹಾದಿಯಲ್ಲೇ ಸಾಗಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಎರಡೂ ಕಣ್ಣುಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಇಬ್ಬರಿಗೆ ಪುನೀತ್ ರಾಜ್ ಕುಮಾರ್ ರವರ ಕಣ್ಣುಗಳನ್ನು ಶಸ್ತ್ರಚಿಕಿತ್ಸೆ ಮೂಲಕ ಅಳವಡಿಸಲಾಗಿದ್ದು, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಈ ಮೂಲಕ ಇಬ್ಬರ ಬಾಳಿನಲ್ಲಿ ಪುನೀತ್ ರಾಜ್ ಕುಮಾರ್ ಬೆಳಕಾಗಿದ್ದಾರೆ.

Also Read  ಕುಟ್ರುಪಾಡಿ: ಗ್ರಾಮ ವಾಸ್ತವ್ಯದಲ್ಲಿ ಸಚಿವ ಎಸ್.ಅಂಗಾರ ಭಾಗಿ

error: Content is protected !!
Scroll to Top