ಮಂಗಳೂರು: ಇತ್ತಂಡಗಳ ನಡುವೆ ಹೊಡೆದಾಟ ➤ ಏಳು ಮಂದಿಯ ಬಂಧನ

(ನ್ಯೂಸ್ ಕಡಬ) Newskadaba.com ಮಂಗಳೂರು, ನ. 01. ಇತ್ತಂಡಗಳ ನಡುವೆ ನಡೆದ ಗುಂಪು ಘರ್ಷಣೆಯಲ್ಲಿ ಭಾಗಿಯಾಗಿದ್ದ ಏಳು ಮಂದಿಯನ್ನು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಬಂಧಿತರನ್ನು ಧೀರಜ್ ಶೆಟ್ಟಿ, ರಕ್ಷಿತ್.ಕೆ, ರೋಹಿತ್ ಶೆಟ್ಟಿ, ಹರ್ಷಿತ್, ಕೀರ್ತಿರಾಜ್, ವಿವೇಕ್ ಹಾಗೂ ರಾಹುಲ್ ಎಂದು ಗುರುತಿಸಲಾಗಿದೆ. ಸುಮಾರು 15-20 ಜನರಿದ್ದ ಯುವಕರ ತಂಡವು ಪರಸ್ಪರ ಒಬ್ಬರನ್ನೊಬ್ಬರು ಎಳೆದಾಡಿಕೊಂಡು ಮರದ ವಿಕೆಟ್, ಪೈಪ್ ಹಾಗೂ ಕಲ್ಲುಗಳನ್ನು ಹಿಡಿದು ಹಲ್ಲೆಗೈದಿದ್ದಲ್ಲದೇ ವಾಹನಗಳಿಗೂ ಹಾನಿಗೈದಿದ್ದು, ಆರು ದ್ವಿಚಕ್ರ ವಾಹನಗಳ ಜಖಂಗೊಂಡಿವೆ ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿ ಕಮಿಷನರ್ ಮಾಹಿತಿ ನೀಡಿದ್ದು, ಘಟನೆಗೆ ಸಂಬಂಧಿಸಿ ಪೊಲೀಸರು ಏಳು ಮಂದಿಯ ಬಂಧಿಸಿ, ಅವರ ವಿರುದ್ದ ಸ್ವಯಂ ಪ್ರೇರಿತ ಕೇಸು ದಾಖಲಿಸಿ, ತನಿಖೆ ಮುಂದುವರಿಸಿದ್ದಾರೆ.

Also Read   ಚಾಕೋಲೇಟ್ ಆಸೆ ತೋರಿಸಿ ಬಾಲಕಿಯ ಮೇಲೆ ಅತ್ಯಾಚಾರ

error: Content is protected !!
Scroll to Top