ಕಡಬ: ಕನ್ನಡ ರಾಜ್ಯೋತ್ಸವ ಆಚರಣೆ

(ನ್ಯೂಸ್ ಕಡಬ) Newskadaba.com ಕಡಬ, ನ. 01. ರಾಷ್ಟ್ರೀಯ ಹಬ್ಬಗಳ ಅಚರಣಾ ಸಮಿತಿ ಕಡಬ ಇದರ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಪುತ್ತೂರು ತಾಲೂಕು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಅವರು, ಭುವನೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

ಗಾಂಧಿ ವಿಚಾರ ವೇದಿಕೆ ಕಡಬ ತಾಲೂಕು ಅಧ್ಯಕ್ಷ ಟಿ.ಎಮ್ ಮ್ಯಾಥ್ಯೂ ಪ್ರಧಾನ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಎಪಿಎಂಸಿ ನಿರ್ದೇಶಕಿ ಪುಲಸ್ತ್ಯಾ ರೈ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಪಿ.ಪಿ ವರ್ಗೀಸ್, ಕಡಬ ತಹಶೀಲ್ದಾರ್ ಅನಂತ ಶಂಕರ, ಕಡಬ ಠಾಣಾ ಎಸ್. ಐ ರುಕ್ಮ ನಾಯಕ್, ಮಂಡಲ ಪಂಚಾಯತ್ ಮಾಜಿ ಸದಸ್ಯ ಮೀರಾ ಸಾಹೇಬ್, ಶ್ರೀ ರಾಮಕುಂಜೇಶ್ವರ ಪದವಿ ಕಾಲೇಜು ಪ್ರಾಂಶುಪಾಲ ಗಣರಾಜ ಕುಂಬ್ಲೆ, ಕಡಬ ಪಟ್ಟಣ ಪಂಚಾಯಿತಿ ಅಧಿಕಾರಿ ಮತ್ತಡಿ ಮೊದಲಾದವರು ಉಪಸ್ಥಿತರಿದ್ದರು.

Also Read  ಶಿರಾಡಿ: ಒಂಟಿಸಲಗ ದಾಳಿ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ

error: Content is protected !!