ನಿಯಂತ್ರಣ ತಪ್ಪಿದ ಬೊಲೆರೋ ಢಿಕ್ಕಿ ➤ ಓರ್ವ ಮೃತ್ಯು, ಮೂವರಿಗೆ ಗಾಯ

(ನ್ಯೂಸ್ ಕಡಬ) Newskadaba.com ಶಿವಮೊಗ್ಗ, ನ. 01. ಚಾಲಕನ ನಿಯಂತ್ರಣ ತಪ್ಪಿದ ಬೊಲೆರೋ ವಾಹನವೊಂದು ವ್ಯಕ್ತಿಯೋರ್ವನಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಲಯನ್ ಸಫಾರಿ ಸಮೀಪದ ಮುದ್ದಿನಕೊಪ್ಪ ಕ್ರಾಸ್ ಬಳಿ ನಡೆದಿದೆ.

ಮೃತ ವ್ಯಕ್ತಿಯನ್ನು ಆದಿತ್ಯ ಕನ್ ಸ್ಟ್ರಕ್ಚನ್ ಕಾರ್ಮಿಕ ಚಂದ್ರಶೇಖರ್ ಎಂದು ಗುರುತಿಸಲಾಗಿದೆ. ವೇಗವಾಗಿ ಬಂದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ವ್ಯಕ್ತಿಯೋರ್ವರಿಗೆ ಢಿಕ್ಕಿ ಹೊಡೆದು, ಬಳಿಕ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ದ್ವಿಚಕ್ರವಾಹನ ಸವಾರನ ಕಾಲಿಗೆ ಗಂಭೀರ ಗಾಯವಾಗಿದ್ದು, ಆತನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೊಲೆರೋ ವಾಹನದಲ್ಲಿದ್ದ ಇಬ್ಬರಿಗೂ ಸಹ ಗಾಯಗಳಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಬೆಳ್ತಂಗಡಿ: ಮನೆಯ ಬಾವಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ..!

error: Content is protected !!
Scroll to Top