ಸ್ವಿಫ್ಟ್ ಡಿಸೈರ್ ಕಾರು – ಹೋಂಡಾ ಡಿಯೋ ನಡುವೆ ಢಿಕ್ಕಿ ➤ ಸವಾರ ಮೃತ್ಯು



(ನ್ಯೂಸ್ ಕಡಬ) newskadaba.com ಪುತ್ತೂರು, ನ.01. ಸ್ವಿಫ್ಟ್ ಡಿಸೈರ್ ಕಾರು ಮತ್ತು ಹೋಂಡಾ ಡಿಯೋ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಗಂಭೀರ ಗಾಯಗೊಂಡ ದ್ವಿಚಕ್ರ ವಾಹನ ಸವಾರ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟ ಘಟನೆ ನರಿಮೊಗರು ಎಂಬಲ್ಲಿ ಸೋಮವಾರ ಸಂಜೆ ಸಂಭವಿಸಿದೆ.





ಮೃತ ಸವಾರನನ್ನು ಪೇರಮೊಗರು ನಿವಾಸಿ ಸೋಮಶೇಖರ್ ಎಂದು ಗುರುತಿಸಲಾಗಿದೆ. ಪುತ್ತೂರಿನಿಂದ ಸವಣೂರು ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಡಿಸೈರ್‌ ಕಾರು ಮತ್ತು ಸವಣೂರಿನಿಂದ ಪುತ್ತೂರಿಗೆ ಬರುತ್ತಿದ್ದ ಹೋಂಡಾ ಡಿಯೋ ನಡುವೆ ನರಿಮೊಗರು ಸಮೀಪದ ಕೊಡಿನೀರು ಎಂಬಲ್ಲಿ ಢಿಕ್ಕಿಯುಂಟಾಗಿ ಈ ದುರ್ಘಟನೆ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ಸೋಮಶೇಖರ್ ರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಹಾದಿ ಮಧ್ಯೆ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.






 

 

error: Content is protected !!
Scroll to Top