ಬೆಳ್ತಂಗಡಿ: ನೆಲಕ್ಕೆ ಬಿದ್ದ ಕೋವಿಯಿಂದ ಆಕಸ್ಮಿಕವಾಗಿ ಹಾರಿದ ಗುಂಡು..! ➤ ವ್ಯಕ್ತಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 02. ಕೋವಿಯೊಂದು ನೆಲಕ್ಕೆ ಬಿದ್ದ ಸಂದರ್ಭ ಆಕಸ್ಮತ್ತಾಗಿ ಗುಂಡು ಸಿಡಿದು ವ್ಯಕ್ತಿಯೋರ್ವರ ಕಾಲಿಗೆ ತಾಗಿರುವ ಘಟನೆ ತಾಲೂಕಿನ ಮಚ್ಚಿನ ಗ್ರಾಮದ ಮಾಯಿಲೋಡಿ ಎಂಬಲ್ಲಿ ನಡೆದಿದೆ.


ಗಾಯಗೊಂಡವರನ್ನು ಕುಮಾರಯ್ಯ ನಾಯ್ಕ ಎಂದು ಗುರುತಿಸಲಾಗಿದೆ. ಮಾಯಿಲೋಡಿಯ ವಿಶ್ವನಾಥ ನಾಯ್ಕ್ ಎಂಬವರು ತನ್ನ ಜಮೀನಿಗೆ ಬರುವ ಕಾಡುಪ್ರಾಣಿಗಳನ್ನು ಓಡಿಸಲೆಂದು ಪರವಾನಿಗೆ ಹೊಂದಿರುವ ಕೋವಿಯನ್ನು ಉಪಯೋಗಿಸುವ ಸಂದರ್ಭದಲ್ಲಿ ಅಜಾಗರೂಕತೆ ತೋರಿದ ಪರಿಣಾಮ ಕೋವಿ ನೆಲಕ್ಕೆ ಬಿದ್ದು ಆಕಸ್ಮಿಕವಾಗಿ ಗುಂಡು ಸಿಡಿದು ಪಕ್ಕದಲ್ಲಿ ನಿಂತಿದ್ದ ಕುಮಾರಯ್ಯ ನಾಯ್ಕ ಎಂಬವರ ಕಾಲಿಗೆ ಗುಂಡು ತಗುಲಿದೆ ಎನ್ನಲಾಗಿದೆ. ಪರಿಣಾಮ ಕಾಲಿಗೆ ಗಾಯವಾಗಿದ್ದು, ಕೂಡಲೇ ಅವರಿಗೆ ಪ್ರಾಥಮಿಕ ಆರೈಕೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಕುರಿತು ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಯಾದಗಿರಿಯ ನಾರಾಯಣಪುರ ಎಡದಂಡೆ ಕಾಲುವೆ ಯೋಜನೆ ➤ಪ್ರಧಾನಿ ಮೋದಿಯಿಂದ ನಾಳೆ ಉದ್ಘಾಟನೆ

error: Content is protected !!
Scroll to Top