ಅಡುಗೆ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟ ► ತಗಡಿನ ಮನೆ ಜಖಂ

(ನ್ಯೂಸ್ ಕಡಬ) newskadaba.com ವಿಜಯಪುರ, ನ.2. ಮನೆಯೊಳಗೆ ಅಡುಗೆ ಮಾಡುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟ ಗೊಂಡ ಘಟನೆ ಸಿಂದಗಿ ತಾಲೂಕಿನ ಪಡಗಾನೂರ ಗ್ರಾಮದಲ್ಲಿ ನಡೆದಿದೆ.

ಘಟನೆಯಿಂದಾಗಿ ತಗಡು ಶೀಟಿನ ಮನೆ ಸಂಪೂರ್ಣವಾಗಿ ಜಖಂ ಗೊಂಡಿದೆ. ಮನೆಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಮನೆ ಹೊರಗೆ ಓಡಿದ ವೃದ್ದ ಮಹಿಳೆ, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದಾಗಿ ಮನೆಯಲ್ಲಿದ್ದ ಧವಸ ಧಾನ್ಯ, ಬಟ್ಟೆ, ಗೃಹೊಪಯೋಗಿ ವಸ್ತುಗಳು ಸಂಪೂರ್ಣವಾಗಿ ಸುಟ್ಟು ನಾಶವಾಗಿದೆ.

ಘಟನೆ ಕುರಿತು ದೇವರ ಹಿಪ್ಪರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top