ಜಿಮ್ ಹಾಗೂ ಫಿಟ್ನೆಸ್ ಸೆಂಟರ್ ಗಳಿಗೆ ಶೀಘ್ರವೇ ಮಾರ್ಗಸೂಚಿ ಬಿಡುಗಡೆ ➤ ಆರೋಗ್ಯ ಸಚಿವ

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ನ. 02. ಜಿಮ್ ಮತ್ತು ಫಿಟ್ನೆಸ್ ಸೆಂಟರ್‌ಗಳಲ್ಲಿ ಮಾರ್ಗಸೂಚಿ ತರುವುದರ ಕುರಿತು ಖ್ಯಾತ ಹೃದಯ ತಜ್ಞರೊಂದಿಗೆ ಚರ್ಚಿಸಿ ಕೂಡಲೇ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಹೃದಯಾಘಾತದಿಂದ ನಟ ಪುನೀತ್ ರಾಜಕುಮಾರ್ ಅವರು ಮೃತಪಟ್ಟ ಹಿನ್ನೆಲೆ, ಜಿಮ್‌ಗಳಿಗೆ ಮಾರ್ಗಸೂಚಿ ತರುವ ಬಗ್ಗೆ ಚರ್ಚಿಸಲಾಗುತ್ತಿದ್ದು, ಈ ವಿಚಾರವಾಗಿ ಮಾತನಾಡಿದ ಅವರು, ಆರೋಗ್ಯದ ಹಿತದೃಷ್ಟಿಯಿಂದ ವ್ಯಾಯಾಮ ಮಾಡಬೇಕಾಗುತ್ತದೆ. ಜಿಮ್‌ನಿಂದ ಆರೋಗ್ಯಕ್ಕೆ ಸಮಸ್ಯೆಯಾಗುತ್ತದೆ ಎಂಬ ತಪ್ಪು ಕಲ್ಪನೆ ಬೇಡ. ಜಿಮ್, ಯೋಗ ಹಾಗೂ ಕ್ರೀಡೆಯಿಂದ ಆರೋಗ್ಯಕ್ಕೆ ಯಾವುದೇ ಅಪಾಯವಿಲ್ಲ. ಕೆಲವರಲ್ಲಿ ಮಾತ್ರ ಏಕೆ ಆರೋಗ್ಯ ಸಮಸ್ಯೆ ಉಂಟಾಗುತ್ತಿದೆ ಎಂಬುದನ್ನು ಅಧ್ಯಯನ ಮಾಡಲಾಗುತ್ತಿದೆ. ಕೆಲವರು ಮೊದಲು ವೈದ್ಯಕೀಯ ಪರೀಕ್ಷೆ ಮಾಡಿಸಿಕೊಂಡು ನಂತರ ಜಿಮ್ ಮಾಡಬೇಕಾಗುತ್ತದೆ. ಜಿಮ್ ನಿಂದಲೇ ಹೃದಯ ತೊಂದರೆ ಬರುತ್ತದೆ ಎಂಬುದು ಸುಳ್ಳು ಸುದ್ದಿ ಎಂದರು.

error: Content is protected !!

Join the Group

Join WhatsApp Group