ಕಾಲೇಜಿನಲ್ಲೇ ಹೃದಯಾಘಾತ- ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ನ. 02. ವಿದ್ಯಾರ್ಥಿಯೋರ್ವ ಕಾಲೇಜಿನಲ್ಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಕಾಶ್(17) ಎಂದು ಗುರುತಿಸಲಾಗಿದೆ. ಈತ ಕಾಲೇಜಿನಲ್ಲೇ ಅಸ್ವಸ್ಥಗೊಂಡು ಕುಸಿದುಬಿದ್ದಿದ್ದು, ತಕ್ಷಣವೇ ಆಸ್ಪತ್ರೆಗೆ ಸಾಗಿಸುವ ಪ್ರಯತ್ನವನ್ನು ಮಾಡಲಾಯಿತಾದರೂ ಆತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಎಂದಿನಂತೆ ಕಾಲೇಜಿಗೆ ಬಂದಿದ್ದ ಈತ ಆಯಾಸವೆಂದು ಕುಳಿತುಕೊಂಡಿದ್ದ. ತಕ್ಷಣ ಶಿಕ್ಷಕರು ಮನೆಯವರಿಗೆ ತಿಳಿಸಿ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದಾರೆ. ಆದರೆ ಬಾಲಕನನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಆತ ಮೃತಪಟ್ಟಿದ್ದಾನೆ.

Also Read  ಗೋಳಿತೊಟ್ಟು: ಲಾರಿ ಚಾಲಕನ ಕೈಕಾಲು ಕಟ್ಟಿ ಹಾಕಿ ದರೋಡೆ ಪ್ರಕರಣ ಭೇದಿಸಿದ ಪೊಲೀಸರು ➤ ಉಪ್ಪಿನಂಗಡಿ ಪೊಲೀಸರಲ್ಲಿ ಸತ್ಯ ಬಾಯ್ಬಿಟ್ಟ ಆರೋಪಿ ಲಾರಿ ಮಾಲೀಕ

error: Content is protected !!
Scroll to Top