ಪುತ್ತೂರು: ವಸತಿ ಗೃಹವೊಂದರಲ್ಲಿ ಅನ್ಯಕೋಮಿನ ಜೋಡಿ‌ ಪತ್ತೆ ➤ ಪೊಲೀಸರಿಗೊಪ್ಪಿಸಿದ ಹಿಂಜಾವೇ ಕಾರ್ಯಕರ್ತರು

(ನ್ಯೂಸ್ ಕಡಬ) Newskadaba.com ಪುತ್ತೂರು, ನ. 03. ಇಲ್ಲಿನ ಬಸ್ ನಿಲ್ದಾಣದಲ್ಲಿ ಅನ್ಯಕೋಮಿನ ವ್ಯಕ್ತಿಯ ಜೊತೆ ಬೆಂಗಳೂರು ಮೂಲದ ಯುವತಿಯೋರ್ವಳು ಪತ್ತೆಯಾದ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ.


ಬೆಂಗಳೂರಿನ ವಾಸಿಂ ಹಾಗೂ ಕುಂದಾಪುರ ಮೂಲದ ಸದ್ಯ ಬೆಂಗಳೂರಿನಲ್ಲಿ ವಾಸವಿರುವ ಯುವತಿಯ ನಡುವೆ ಪ್ರೇಮಾಂಕುರವಾಗಿ ಆಕೆ ಆತನೊಂದಿಗೆ ಮನೆ ಬಿಟ್ಟು ಬಂದಿದ್ದಾಳೆ ಎನ್ನಲಾಗಿದೆ. ವಾಸಿಂಗೆ ಈಗಾಗಲೇ ಮದುವೆಯಾಗಿ ಎರಡು ಮಕ್ಕಳಿದ್ದಾರೆ ಎನ್ನಲಾಗಿದೆ.
ಯುವತಿ ಕಾಣೆಯಾದ ಬಗ್ಗೆ ಯುವತಿಯ ಮನೆಯವರಿಗೆ ತಲಿಸಿದ್ದು, ಈ ಕುರಿತು ಅವರು ಬೆಂಗಳೂರಿನಲ್ಲಿ ಕಾಣೆಯಾದ ಬಗ್ಗೆ ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ. ಯುವತಿ ಮತ್ತು ವ್ಯಕ್ತಿ ವಸತಿ ಗೃಹವೊಂದರಲ್ಲಿ ತಂಗಿರುವ ಕುರಿತು ಖಚಿತಪಡಿಸಿಕೊಂಡ ಹಿಂಜಾವೇ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು ಆಗಮಿಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

Also Read  ಪ್ರಧಾನಿ ಮೋದಿ: ಸಿದ್ದರಾಮಯ್ಯ ವಿರುದ್ಧ ತನಿಖೆಯಾಗಲೇಬೇಕು

error: Content is protected !!
Scroll to Top