ದ.ಕ ಜಿಲ್ಲೆಯ ವಿವಿಧ ಕಡೆ ಕಳ್ಳತನ ಪ್ರಕರಣ ➤ ಕಡಬ ಮೂಲದ ಆರೋಪಿ ಕೊನೆಗೂ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಕಡಬ, ನ. 04. ಜಿಲ್ಲೆಯ ಹಲವು ಠಾಣೆಗಳಲ್ಲಿ ಸಂಪ್ಯ, ಪುತ್ತೂರು, ಪ್ರಕರಣ ದಾಖಲಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೊಯಿಲ ಮೂಲದ ಆರೋಪಿಯೋರ್ವನನ್ನು ಸಂಪ್ಯ ಪೊಲೀಸರು ಕೇರಳದಲ್ಲಿ ಬಂಧಿಸಿದ ಘಟನೆ ನಡೆದಿದೆ.

ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ಕೊಯಿಲ ಫಾರ್ಮ್ ಬಳಿಯ ನಿವಾಸಿ ಇಬ್ರಾಹಿಂ ಖಲಂದರ್ ಎಂದು ಗುರುತಿಸಲಾಗಿದೆ. 2019ರಲ್ಲಿ ಸಂಪ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ, ಈತನ ವಿರುದ್ಧ ಕೇಸು ದಾಖಲಿಸಲಾಗಿದ್ದು, ಆದರೆ ಈತ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಕಿ ಹಿನ್ನೆಲೆ ನ್ಯಾಯಾಲಯವು ಆರೋಪಿ ವಿರುದ್ಧ ವಾರಂಟ್ ಜಾರಿ ಮಾಡಿದ್ದು, ಸಂಪ್ಯ ಪೊಲೀಸರು ಆರೋಪಿಯ ಪತ್ತೆ ಕಾರ್ಯ ಆರಂಭಿಸಿದ್ದರು. ಆರೋಪಿ ಕೇರಳದ ಬೇಕಲ್ ಸಮೀಪ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿರುವುದು ಪೊಲೀಸರ ಕಾರ್ಯಾಚರಣೆ ವೇಳೆ ಬೆಳಕಿಗೆ ಬಂದಿತ್ತು. ನ. 01ರಂದು ಹೊಟೇಲ್ ನಿಂದಲೇ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ನ.02ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯನ್ನು ಪೊಲೀಸರು ವಿಚಾರಣೆ ನಡೆಸಿದಾಗ ಸಂಪ್ಯ ಠಾಣಾ ವ್ಯಾಪ್ತಿಯಲ್ಲಿ ಮಾತ್ರವಲ್ಲದೇ ವಿವಿಧ ಠಾಣೆಗಳಲ್ಲಿ ವಿಚಾರಿಸಿದಾಗ ಆರೋಪಿ ವಿರುದ್ಧ ಹಲವು ಠಾಣೆಗಳಲ್ಲಿ ಪ್ರಕರಣ ದಾಖಲಾಗಿರುವುದು ಬೆಳಕಿಗೆ ಬಂದಿದೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಮೂರು ಕಳವು ಪ್ರಕರಣ, ಉಪ್ಪಿನಂಗಡಿ, ಕಡಬ, ಬಂಟ್ವಾಳ, ಬೆಳ್ತಂಗಡಿ ಹಾಗೂ ಮೂಡಬಿದ್ರೆಯಲ್ಲಿ ದರೋಡೆ ಪ್ರಕರಣ ಮತ್ತು ಕುಂಬ್ಳೆಯಲ್ಲಿ 1 ಕಳವು ಪ್ರಕರಣ ಇರುವುದು ಬೆಳಕಿಗೆ ಬಂದಿದೆ.

Also Read  ಶ್ರೀ ರಾಮಕುಂಜೇಶ್ವರ ಆ.ಮಾ.ಶಾಲೆಯ ಶಿಕ್ಷಕ-ರಕ್ಷಕ ಸಂಘದ ಪ್ರಥಮ ಪೋಷಕರ ಸಭೆ

error: Content is protected !!
Scroll to Top