(ನ್ಯೂಸ್ ಕಡಬ) newskadaba.com ತಿರುವನಂತಪುರಂ, ನ. 04. ತಂದೆಯೋರ್ವನ ಮೂಢನಂಬಿಕೆಗೆ 11 ವರ್ಷದ ಪುತ್ರಿ ಬಲಿಯಾದ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಫಾತಿಮಾ ಎಂದು ಗುರುತಿಸಲಾಗಿದೆ. ಬಾಲಕಿಯ ತಂದೆ ಸತ್ತಾರ್ ರವರ ಮೂಢನಂಬಿಕೆಯಿಂದಾಗಿ ಬಾಲಕಿ ಮೃತಪಟ್ಟಿರುವುದು ತಿಳಿದುಬಂದಿದೆ. ಬಾಲಕಿ ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯದ ತಂದೆ, ಮಸೀದಿ ಇಮಾಮ್ ರ ಬಳಿ ಕರೆದೊಯ್ದು, ಧಾರ್ಮಿಕ ವಿಧಿವಿಧಾನಗಳ ಮೂಲಕ ಚಿಕಿತ್ಸೆ ಕೊಡಿಸಲು ಮುಂದಾಗಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಫಾತಿಮಾ ಮೃತಪಟ್ಟಿದ್ದಾಳೆ. ಈ ಕುರಿತಂತೆ ಸ್ಥಳೀಯರು ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬಾಲ ನ್ಯಾಯ ಕಾಯ್ದೆಯಡಿ ಬಾಲಕಿಯ ತಂದೆ ಮತ್ತು ಇಮಾಮ್ನನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.