(ನ್ಯೂಸ್ ಕಡಬ) newskadaba.com ಪುತ್ತೂರು, ನ. 04. ಪುತ್ತೂರು ಹಾಗೂ ಕಡಬ ವ್ಯಾಪ್ತಿಯಲ್ಲಿರುವ ಸರಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ಒದಗಿಸುವಂತೆ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ಹೊಸ ಕಟ್ಟಡಕ್ಕೆ ಅನುದಾನ ಮಂಜೂರು ಹಾಗೂ ಹೊಸ ಜೀಪು ಒದಗಿಸುವಂತೆ ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಲೋಕೇಶ್, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರಿಗೆ ಮನವಿ ಸಲ್ಲಿಸಿದರು.
ಕಡಬ, ಪುತ್ತೂರು ವ್ಯಾಪ್ತಿಯ ಶಾಲೆಯಲ್ಲಿ ಖಾಲಿಯಿರುವ ಹುದ್ದೆಗೆ ಅತಿಥಿ ಶಿಕ್ಷಕರ ಬೇಡಿಕೆ ➤ ಸಚಿವರಿಗೆ ಮನವಿ
