ಕಡಬ: ನಾಳೆ (ನ.06) ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವಂತೆ ಜನಜಾಗೃತಿ ಸಮಾವೇಶ

(ನ್ಯೂಸ್ ಕಡಬ) newskadaba.com ಕಡಬ, ನ. 05. ವಿಶ್ವ ಹಿಂದೂ ಪರಿಷತ್, ಬಜರಂಗದಳ ಪುತ್ತೂರು ಜಿಲ್ಲೆ ಇದರ ವತಿಯಿಂದ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಶೀಘ್ರವೇ ಜಾರಿಗೊಳಿಸುವಂತೆ ಆಗ್ರಹಿಸಿ ಬೃಹತ್ ಜನ ಜಾಗೃತಿ ಸಮಾವೇಷ ನ. 06ರಂದು ಸಂಜೆ ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.


ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ ಶ್ರೀಕ್ಷೇತ್ರ ಕಾರಿಂಜೆ ಮಠದ ಶ್ರೀ ಮುಕ್ತಾನಂದ ಸ್ವಾಮೀಜಿಯವರು ಉಪಸ್ಥಿತರಿರಲಿದ್ದು, ಜಾಗೃತಿ ಸಂದೇಶವನ್ನು ನೀಡಲಿದ್ದಾರೆ. ವಿ.ಹಿಂ.ಪ ಕರ್ನಾಟಕ ದಕ್ಷಿಣ ಪ್ರಾಂತ ಅಧ್ಯಕ್ಷ ಎಂ.ಬಿ.ಪುರಾಣಿಕ್ ಅವರು ಅಧ್ಯಕ್ಷತೆ ವಹಿಸಿ, ವಿ.ಹಿಂ.ಪ. ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್ ಅವರು ಪ್ರಮುಖ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಜಾಗೃತಿ ಜಾಥಾ ನಡೆಯಲಿದ್ದು, ಕಡಬ ವೃದ್ಧಿ ಹೋಟೆಲ್ ಮುಂಬಾಗದಿಂದ ದುರ್ಗಾಂಬಿಕಾ ದೇವಸ್ಥಾನದವರೆಗೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Also Read  ಪಂಜ: ಅಕ್ರಮ ಮದ್ಯ ಸಾಗಾಟ ಪ್ರಕರಣ ➤ ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು

 

error: Content is protected !!
Scroll to Top