ಕಾರು- ಬೈಕ್ ನಡುವೆ ಢಿಕ್ಕಿ ➤ ರಸ್ತೆಗೆಸೆಯಲ್ಪಟ್ಟ ಸವಾರನ ಮೇಲೆ ಹರಿದ ಲಾರಿ ➤➤ ಸವಾರ ಸ್ಥಳದಲ್ಲೇ ಮೃತ್ಯು



(ನ್ಯೂಸ್ ಕಡಬ) newskadaba.com ಮಂಗಳೂರು, ನ.05. ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಗರದ ಹೊರವಲಯದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕರಂಬಾರು ಮಸೀದಿ ಬಳಿ ನಡೆದಿದೆ.







ಮೃತರನ್ನು ಮಂಗಳೂರಿನ ಕದ್ರಿ ನಿವಾಸಿ ಸಂದೇಶ್ (27)ಎಂದು ಗುರುತಿಸಲಾಗಿದೆ. ಸಂದೇಶ್ ತನ್ನ ಬೈಕ್‌ನಲ್ಲಿ ಬಜ್ಪೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ವೇಳೆ ಎದುರಿನಿಂದ ಬಂದ ಕಾರು ಢಿಕ್ಕಿ ಹೊಡದಿದ್ದು, ಪರಿಣಾಮ ರಸ್ತೆಗೆಸೆಯಲ್ಪಟ್ಟ ಸವಾರನ ಮೇಲೆ ಹಿಂದಿನಿಂದ ಬರುತ್ತಿದ್ದ ಗೂಡ್ಸ್ ಲಾರಿ ಹರಿದಿದ್ದು, ಗಂಭೀರ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






error: Content is protected !!
Scroll to Top