ಸುಳ್ಯ: ಅಡಿಕೆ ಕದ್ದ ಬಾಲಕನಿಗೆ ಮಾರಣಾಂತಿಕ ಹಲ್ಲೆ ➤ 10 ಮಂದಿಯ ವಿರುದ್ದ ಎಫ್ಐಆರ್ ದಾಖಲು



(ನ್ಯೂಸ್ ಕಡಬ) newskadaba.com ಸುಳ್ಯ, ನ. 05. ಅಡಿಕೆ ಕದ್ದ ಆರೋಪದಲ್ಲಿ 16 ವರ್ಷದ ಬಾಲಕನೋರ್ವನಿಗೆ ಗುಂಪು ಹಲ್ಲೆ ನಡೆಸಿದ ಪ್ರಕರಣ ಗುತ್ತಿಗಾರಿನ ಸಮೀಪದ ಪುರ್ಲುಮಕ್ಕಿ ಎಂಬಲ್ಲಿ ನಡೆದಿದೆ.







ಹಲ್ಲೆಗೊಳಗಾದ ಬಾಲಕ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದು, ಹಲ್ಲೆ ನಡೆಸಿದ ಗುತ್ತಿಗಾರು ಪರಿಸರದ ಜೀವನ್, ವರ್ಷಿತ್, ಸಚಿನ್, ಮೋಕ್ಷಿತ್, ಸನತ್, ಮುರಳಿ, ದಿನೇಶ್, ಈಶ್ವರ್, ಚಂದ್ರ, ಚೇತನ್ ಎಂಬವರ ಮೇಲೆ ಎಫ್ ಐ ಆರ್ ದಾಖಲಾಗಿದೆ. ಗುತ್ತಿಗಾರಿನ 16 ವರ್ಷದ ಬಾಲಕನಿಗೆ ಅಡಿಕೆ ಕದ್ದ ಆರೋಪದಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದ್ದಲ್ಲದೇ, ಹಲ್ಲೆಗೈದ ವಿಡಿಯೋ ಕೂಡಾ ವೈರಲ್ ಆಗಿದೆ. ವಿಡಿಯೋ ವೈರಲ್ ಆಗಿ ಪ್ರಕರಣ ದಾಖಲಾಗುತ್ತಿದ್ದಂತೇ ಹಲ್ಲೆ ನಡೆಸಿದವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.






 

error: Content is protected !!
Scroll to Top