ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಬಸವಶ್ರೀ ಪ್ರಶಸ್ತಿ ಪುರಸ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 05. ಅಕಾಲಿಕವಾಗಿ ಅಗಲಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ 2021ನೇ ಸಾಲಿನ ಮರಣೋತ್ತರ ಬಸವಶ್ರೀ ಪ್ರಶಸ್ತಿ ಘೋಷಿಸಲಾಗಿದೆ.


ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಡಾ.ಶಿವಮೂರ್ತಿ ಮುರುಘಾ ಶರಣರು ಪುನೀತ್ ರಾಜ್ ಕುಮಾರ್ ಅವರಿಗೆ ‘ಮರಣೋತ್ತರ ಬಸವಶ್ರೀ ಪ್ರಶಸ್ತಿ’ ನೀಡುವುದಾಗಿ ತಿಳಿಸಿದರು. ಈ ಕುರಿತು ಶಿವರಾಜ್ ಕುಮಾರ್ ಅವರ ಜೊತೆ ಚರ್ಚಿಸಲಾಗಿದೆ ಎಂದ ಅವರು, ಮುರುಘಾ ಮಠದಲ್ಲಿ 2022ರಲ್ಲಿ ನಡೆಯುವ ಬಸವ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಪುನೀತ್ ಪತ್ನಿ ಅಶ್ವಿನಿ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದರು.

Also Read  ರೈಲ್ವೇ ಬ್ರಿಡ್ಜ್  ಬಳಿ ಮಹಿಳೆಯ ಸರ ಕಳ್ಳತನ     ➤ ಪರಾರಿಯಾಗಿದ್ದ ಆರೋಪಿಯ ಬಂಧನ     

error: Content is protected !!
Scroll to Top