ಸುಳ್ಯ: ಕ್ಯಾಶ್ಯೂ ಫ್ಯಾಕ್ಟರಿಯ ಹಳೆ ಕಟ್ಟಡ ಕುಸಿತ ➤ ಗುಜರಿ ವ್ಯಾಪಾರಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ನ. 05. ಇಲ್ಲಿನ ಗಾಂಧಿನಗರದಲ್ಲಿರುವ ಮಲ್ನಾಡು ಕ್ಯಾಶ್ಯೂ ಫ್ಯಾಕ್ಟರಿಯ ಹಳೆ ಕಟ್ಟಡದ ಕಬ್ಬಿಣ ಸಮಾಗ್ರಿಗಳನ್ನು ತೆಗೆಯುತ್ತಿದ್ದ ವೇಳೆ ಗೋಡೆ ಮಗುಚಿ ಬಿದ್ದ ಪರಿಣಾಮ ವ್ಯಾಪಾರಿಯೋರ್ವರು ಮೃತಪಟ್ಟ ಘಟನೆ ನಡೆದಿದೆ.

ಮೃತಪಟ್ಟವರನ್ನು ಗುಜರಿ ವ್ಯಾಪಾರಿ ಅಬ್ದುಲ್ ಖಾದರ್ ಎಂದು ಗುರುತಿಸಲಾಗಿದೆ. ಹಲವಾರು ವರ್ಷಗಳಿಂದ ಸುಳ್ಯದಲ್ಲಿ ಗುಜರಿ ವ್ಯಾಪಾರ ನಡೆಸುತ್ತಿದ್ದ ಇವರು, ಮಲ್ನಾಡು ಕ್ಯಾಶ್ಯೂ ಫ್ಯಾಕ್ಟರಿಯ ಹಳೆಯ ಕಟ್ಟಡವನ್ನು ತೆರವುಗೊಳಿಸುವ ಕಾರ್ಯ ಕೈಗೊಂಡಿದ್ದು, ಇಂದು ಬೆಳಗ್ಗೆ ತಮ್ಮ ಕೆಲಸದಾಳುಗಳ ಜೊತೆ ಗೋಡೆಯ ಮೇಲ್ಭಾಗದಲ್ಲಿದ್ದ ಕಬ್ಬಿಣದ ಟ್ರಸ್‌ ಅನ್ನು ಹಗ್ಗದ ಮೂಲಕ ಎಳೆಯುತ್ತಿರುವಾಗ ಗೋಡೆಯು ಮಗುಚಿ ಅಬ್ದುಲ್ ಖಾದರ್‌ರವರ ಮೇಲೆ ಬಿದ್ದುದರಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

Also Read  ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಉರುಳಿದ ಬಸ್ ➤ ಪ್ರಯಾಣಿಕರಿಗೆ ಗಾಯ

error: Content is protected !!
Scroll to Top