ಜಿಲ್ಲಾಧಿಕಾರಿಗೆ ಪತ್ರ ಮೂಲಕ ಧನ್ಯವಾದ ತಿಳಿಸಿದಿ ಅಶ್ವಿನಿ ಪುನೀತ್ ರಾಜ್ ಕುಮಾರ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 08. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿಧನದ ಬಳಿಕ ಮೊದಲ ಬಾರಿಗೆ ಅವರ ಪತ್ನಿ ಅಶ್ವಿನಿ ಪತ್ರದ ಮೂಲಕ ಡಿಸಿ ಗೆ ಧನ್ಯವಾದ ತಿಳಿಸಿದ್ದಾರೆ.

ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಅವರಿಗೆ ಬರೆದ ಪತ್ರದಲ್ಲಿ, ಪುನೀತ್ ರಾಜ್ ಕುಮಾರ್ ಅವರ ಅಂತ್ಯ ಸಂಸ್ಕಾರದ ವೇಳೆ ನೀಡಿದ ಸಹಕಾರಕ್ಕೆ ಧನ್ಯವಾದ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ನಮ್ಮ ನೋವನ್ನು ಅಡಗಿಸಿಟ್ಟು ಅವರನ್ನು ಸಕಲ ಗೌರವಗಳೊಂದಿಗೆ ಕಳುಹಿಸಿಕೊಡಬೇಕಿತ್ತು. ಅಂತಿಮ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಮಾಡಿ, ಮೆರವಣಿಗೆ ಹಾಗೂ ಅಂತ್ಯಸಂಸ್ಕಾರದ ಸಂದರ್ಭದಲ್ಲಿ ಸಾಕಷ್ಟು ಪೊಲೀಸ್ ಭದ್ರತೆ ನಿಯೋಜಿಸಿ, ಕಾನೂನು ಸುವ್ಯವಸ್ಥೆಗೆ ಎಲ್ಲಿಯೂ ಧಕ್ಕೆಯಾಗದಂತೆ ನೋಡಿಕೊಂಡಿದ್ದೀರಿ, ನಮ್ಮ ಇಡೀ ಕುಟುಂಬ ಹಾಗೂ ಎಲ್ಲ ಅಭಿಮಾನಿಗಳ ಪರವಾಗಿ ನಿಮಗೆ ಮತ್ತು ಎಲ್ಲಾ ಸಿಬ್ಬಂದಿಗಳಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಪತ್ರ ಮುಖೇನ ಅಶ್ವಿನಿ ಪುನೀತ್ ರಾಜ್​​ಕುಮಾರ್ ಧನ್ಯವಾದ ತಿಳಿಸಿದ್ದಾರೆ.

Also Read  ಆಲಂಕಾರು: ಬಸ್ ನಿಲ್ದಾಣದಲ್ಲಿ ಮಲಗಿದ ಸ್ಥಿತಿಯಲ್ಲಿ ವ್ಯಕ್ತಿ ಮೃತ್ಯು..!

error: Content is protected !!
Scroll to Top