ದೀಪಾವಳಿ ರಜೆ ವಿಚಾರವಾಗಿ ಯೋಧರ ನಡುವೆ ಮಾತಿನ ಚಕಮಕಿ- ಗುಂಡು ಹಾರಾಟ ➤ ನಾಲ್ವರು ಮೃತ್ಯು, ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ಛತ್ತೀಸ್ಗಢ, ನ. 08. ದೀಪಾವಳಿ ರಜೆಯ ವಿಚಾರವಾಗಿ ಯೋಧರಿಬ್ಬರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಯೋಧರು ಮೃತಪಟ್ಟು, ಮೂವರ ಗಾಯಗೊಂಡ ಘಟನೆ ತೆಲಂಗಾಣ-ಛತ್ತೀಸ್‌ಗಢ ಗಡಿ ಭಾಗದಲ್ಲಿ ಸೋಮವಾರದಂದು ನಡೆದಿದೆ.

ಮೃತರನ್ನು ಬಿಹಾರದ ರಾಜಮಣಿ ಯಾದವ್, ದಾಂಜಿ ಮತ್ತು ಬಂಗಾಳದ ರಾಜುಮಂಡಲ್ ಎಂದು ಗುರುತಿಸಲಾಗಿದೆ. ಗಾಯಗೊಂಡ ಮೂವರು ಗಾಯಾಳುಗಳನ್ನು ಭದ್ರಾಚಲಂ ಏರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯ ಲಿಂಗಂಪಲ್ಲಿ ಬೇಸ್ ಕ್ಯಾಂಪ್‌ನಲ್ಲಿ ದೀಪಾವಳಿ ರಜೆ ವಿಚಾರವಾಗಿ ಯೋಧರ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ಸಂದರ್ಭ ಇಬ್ಬರೂ ಹೊಡೆದಾಡಿಕೊಂಡಿದ್ದಾರೆ. ಬಳಿಕ ಜಗಳ ತಾರಕ್ಕೇರಿದ್ದು, ಪರಸ್ಪರ ಗನ್‌ಗಳಿಂದ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾರೆ. ಇವರಿಬ್ಬರ ಜೊತೆಗೆ ಮತ್ತಿಬ್ಬರು ಯೋಧರೂ ಕೂಡ ಘಟನೆಯಲ್ಲಿ ಮೃತಪಟ್ಟಿದ್ದಾರೆ‌. ಚಿಕಿತ್ಸೆ ಪಡೆಯುತ್ತಿರುವ ಇತರೆ ಮೂವರು ಯೋಧರ ಸ್ಥಿತಿ ಕೂಡ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಅಧಿಕಾರಿಗಳು, ಪ್ರಕರಣವನ್ನು ತನಿಖೆಗೆ ಆದೇಶಿಸಿದ್ದಾರೆಂದು ವರದಿಗಳು ತಿಳಿಸಿವೆ.

Also Read  ಉಡುಪಿ: ಅಮಾನವೀಯ ರೀತಿಯಲ್ಲಿ ಗಂಡು ಕರುವಿನ ಸಾಗಾಟಕ್ಕೆ ಯತ್ನ...!

error: Content is protected !!
Scroll to Top