ಗೋಕಳ್ಳನೆಂಬ ಶಂಕೆಯಿಂದ ಯುವಕನನ್ನು ಥಳಿಸಿ ಹತ್ಯೆ

(ನ್ಯೂಸ್ ಕಡಬ) newskadaba.com ಅಗರ್ತಲಾ, ನ. 08. ಗೋಕಳ್ಳ ಎಂದು ಶಂಕಿಸಿ ವ್ಯಕ್ತಿಯೊಬ್ಬನನ್ನು ಹೊಡೆದು ಕೊಂದಿರುವ ಘಟನೆ ತ್ರಿಪುರಾದ ಸೆಪಹಿಜಾಲಾ ಜಿಲ್ಲೆಯ ಸೋನಮುರಾ ಉಪವಿಭಾಗದ ಕಮಲ್ ನಗರ ಗ್ರಾಮದಲ್ಲಿ ನಡೆದಿದೆ.

ತಡರಾತ್ರಿಯಲ್ಲಿ ಮೂವರು ಶಂಕಿತ ಜಾನುವಾರು ಕಳ್ಳ ಸಾಗಾಣಿಕೆದಾರರು ಹಸುಗಳನ್ನು ಕದಿಯಲು ಲಿಟನ್ ಪೌಲ್ ಎಂಬವರ ಮನೆಗೆ ಪ್ರವೇಶಿಸಿದ್ದಾರೆ ಎಂದು ಆರೋಪಿಸಿ, ಜನರು ಮೂವರನ್ನು ಅಟ್ಟಾಡಿಸಿದ್ದಾರೆ. ಈ ಮೂವರ ಪೈಕಿ ಇಬ್ಬರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಆದರೆ ಓರ್ವನಿಗೆ ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಆತನನ್ನು ಸ್ಥಳೀಯ ಗುಂಪೊಂದು ಹೊಡೆದು ಕೊಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮೃತಪಟ್ಟವನ ಕುರಿತು ಇನ್ನಷ್ಟೇ ತಿಳಿದು ಬರಬೇಕಿದೆ.

Also Read  ಕಡಬ: ಚಿರತೆಯ ಹೆಜ್ಜೆಗುರುತು ಪತ್ತೆ ➤ ಆತಂಕದಲ್ಲಿ ಸ್ಥಳೀಯರು

error: Content is protected !!
Scroll to Top