ಪುತ್ತೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ➤ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು, ನ. 08. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಅಂಬೇಡ್ಕರ್‌ ಅಪತ್ಬಾಂಧವ ಟ್ರಸ್ಟ್‌ ನ ಅಧ್ಯಕ್ಷನ ವಿರುದ್ದ ಪೊಕ್ಸೋ ಪ್ರಕರಣ ದಾಖಲಾಗಿದೆ.


ಆರೋಪಿ ರಾಜು ಹೊಸ್ಮಠ ಎಂದು ಗುರುತಿಸಲಾಗಿದೆ. 2019ರಲ್ಲಿ ತಂದೆ ಜೊತೆ ರಾಜು ಅವರ ಕಛೇರಿಗೆ ತೆರಳಿದ ಯುವತಿಗೆ ಆರೋಪಿಯ ಪರಿಚಯವಾಗಿತ್ತು. ನಂತರ ಆರೋಪಿ ಮದುವೆಯಾಗುವುದಾಗಿ ನಂಬಿಸಿ, ಆಕೆಗೆ ಆತನ ಕಚೇರಿಯಲ್ಲಿ ಲೈಂಗಿಕ ಕಿರುಕುಳ ನೀಡಿರುವುದಾಗಿ ಸಂತ್ರಸ್ತೆ ಆರೋಪಿಸಿದ್ದಾಳೆ. ಈ ಕುರಿತು ಸಂತ್ರಸ್ತೆ ನೀಡಿದ ದೂರಿನಂತೆ ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆ 2012 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿಯು ತಲೆ ಮರೆಸಿಕೊಂಡಿದ್ದಾನೆ ಎನ್ನಲಾಗಿದೆ.

Also Read  ಕಡಬ: ಕಂದಾಯ, ಪೊಲೀಸ್ ಇಲಾಖೆಗಳಲ್ಲಿ ದಲಿತ ವಿರೋಧಿ ನೀತಿಯ ಆರೋಪ ► ತಾಲೂಕು ಉದ್ಘಾಟನೆಗೆ ಆಗಮಿಸುವ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸುವ ಎಚ್ಚರಿಕೆ

error: Content is protected !!
Scroll to Top