ಪೈಂಟಿಂಗ್ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ನ. 08. ಪೈಂಟಿಂಗ್ ಮಾಡುತ್ತಿದ್ದ ವೇಳೆ ಮೇಲಿನಿಂದ ಬಿದ್ದು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಮೇಲ್ಪರಂಬ ಎಂಬಲ್ಲಿ ನಡೆದಿದೆ.

ಮೃತಪಟ್ಟವರನ್ನು ಮೇಲ್ಪರಂಬ ಕೈನೋತ್ ನಿವಾಸಿ ಭಾಸ್ಕರ(56) ಎಂದು ಗುರುತಿಸಲಾಗಿದೆ. ಮೇಲ್ಪರಂಬ ಎಂಬಲ್ಲಿ ಮನೆಯೊಂದರ ಪೈಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆಳಗೆಬಿದ್ದು, ಗಂಭೀರ ಗಾಯಗೊಂಡಿದ್ದು, ಕೂಡಲೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಬೇಕಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top