ಕಡಬ ಏಮ್ಸ್ ಕಾಲೇಜು ಪ್ರಿನ್ಸಿಪಾಲ್ ಸಮೀರಾ ಕೆ.ಎ ರವರಿಗೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 08. ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಉಪನ್ಯಾಸ, ಸನ್ಮಾನ ಕಾರ್ಯಕ್ರಮ, ಭಾಷಣ ಸ್ಪರ್ಧೆಯು ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ರವರ ಅಧ್ಯಕ್ಷತೆಯಲ್ಲಿ ಮಂಗಳೂರು ನಗರದ ಸಾಮರ್ಥ್ಯ ಸೌಧದ ಸಭಾಂಗಣದಲ್ಲಿ ನಡೆಯಿತು.


ಕನ್ನಡದಲ್ಲಿ ಸಾಧನೆಗೈದವರಿಗೆ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಕಡಬ ಏಮ್ಸ್ ಪ್ರಥಮ ದರ್ಜೆ ಕಾಲೇಜಿನ ಸ್ಥಾಪಕ ಟ್ರಸ್ಟಿ, ಪ್ರಧಾನ ಕಾರ್ಯದರ್ಶಿ ಹಾಗೂ ಪ್ರಾಂಶುಪಾಲೆ ಸಮೀರಾ ಕೆ.ಎ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಬ್ಯಾರಿ ಅಕಾಡೆಮಿ ರಿಜಿಸ್ಟ್ರಾರ್ ಪೂರ್ಣಿಮಾ ಸ್ವಾಗತಿಸಿ, ಬ್ಯಾರಿ ಅಕಾಡೆಮಿ ಸದಸ್ಯ ಶಂಶೀರ್ ಬುಡೋಳಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Also Read  ರಾಜ್ಯ ವಕ್ಫ್ ಮಂಡಳಿ ನೂತನ ಅಧ್ಯಕ್ಷರಾಗಿ ಮೌಲಾನಾ ಶಾಫಿ ಸ-ಅದಿ ಆಯ್ಕೆ

error: Content is protected !!
Scroll to Top