(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ನ.2. ಶಿಕ್ಷಕನ ಹುದ್ದೆಯ ಮಹತ್ವ ಅರಿತು ಗುಣಾತ್ಮಕ ಶಿಕ್ಷಣವನ್ನು ನೀಡುವುದೆ ಪ್ರತಿಯೊಬ್ಬ ಶಿಕ್ಷಕನ ಧೈಯವಾಗಬೇಕು ಎಂದು ಕರ್ನಾಟಕ ರಾಜ್ಯ ಪದವಿಧರ ಪ್ರಾಥಮಿಕ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಅಮರನಾಥ ಗೌಡ ಹೇಳಿದರು.
ಇತ್ತೀಚೆಗೆ ಉಪ್ಪಿನಂಗಡಿಯಲ್ಲಿ ನಡೆದ ಕರ್ನಾಟಕ ರಾಜ್ಯ ಪದವಿಧರ ಪ್ರಾಥಮಿಕ ಶಿಕ್ಷಕರ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಆಯ್ಕೆ ಸಭೆ ಹಾಗೂ ಪ.ಪ್ರಾ.ಶಿಕ್ಷಕರ ಸ್ನೇಹ ಸಂಗಮ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಮಾತನಾಡಿದರು. ಅರ್ಹತೆ ಅಧರಿಸಿ ಶಿಕ್ಷಕರಿಗೆ ಸಿಗಬೇಕಾದ ಮೂಲಭೂತ ಸೌಲಭ್ಯದ ಹಕ್ಕನ್ನು ಪಡೆಯುವುದು ಸಂಘದ ಧೈಯವಾಗಿದೆ. ಗುಣಾತ್ಮಕ ಶಿಕ್ಷಣಕ್ಕೆ ಬೇಕಾದ ತಯಾರಿ ಮೊದಲಾದ ರೂಪುರೇಷೆಗಳನ್ನು ಸಿದ್ದಪಡಿಸಿಕೊಳ್ಳುವುದು ಸಂಘದ ಮುಖಾಂತರ ನಡೆಯಲಿದೆ ಎಂದರು.
ಸಂಘದ ಗೌರವಾಧ್ಯಕ್ಷ ಯಲ್ಲಪ್ಪ ಗೌಡ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪದವೀಧರ ಪ್ರಾಥಮಿಕ ಶಿಕ್ಷಕರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಲು ಪ್ರಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.
ರಾಜ್ಯ ಸಂಘದ ಕಾರ್ಯಧ್ಯಕ್ಷ ಮುರಳೀಧರ, ರಾಜ್ಯ ವಕ್ತಾರ ರವಿಕುಮಾರ್, ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು. ಕುಮಾರಿ ಶಾರದ ಕಾರ್ಯಕ್ರಮವನ್ನು ನಿರೂಪಿಸಿದರು. ಯೋಗಿಶ್ ಸ್ವಾಗತಿಸಿ, ನವೀನ್.ಎ ವಂದಿಸಿದರು.