ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಉಚಿತ ಶಾಲೆ ➤ ಜನಾರ್ಧನ ರೆಡ್ಡಿ ಘೋಷಣೆ

(ನ್ಯೂಸ್ ಕಡಬ) newskadaba.com ಬಳ್ಳಾರಿ, ನ. 08. ದಿವಂಗತ ನಟ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್​​ ಅವರ ಹೆಸರಿನಲ್ಲಿ ಬಳ್ಳಾರಿಯಲ್ಲಿ ಉಚಿತ ಶಾಲೆಯೊಂದನ್ನು ಆರಂಭಿಸುವುದಾಗಿ ಮಾಜಿ ಸಚಿವ ಜನಾರ್ಧನ ರೆಡ್ಡಿ ಘೋಷಿಸಿದ್ದಾರೆ.

ಈ ಕುರಿತು ಪುನೀತ್ ರಾಜ್ ಕುಮಾರ್ ಅವರ ಶ್ರದ್ದಾಂಜಲಿ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ, ಬಳ್ಳಾರಿ ಬಸ್ ನಿಲ್ದಾಣಕ್ಕೆ ಪುನೀತ್​​ ಹೆಸರಿಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗುವುದು, ಇನ್ನು ಪುನೀತ್ ವಯಸ್ಸಿನಲ್ಲಿ ನನಗಿಂತ ಚಿಕ್ಕವನಾದರೂ ಆತ ಹಾಕಿರುವ ಮಾರ್ಗದಲ್ಲಿ ನಾನು ಕೂಡಾ ಊರಿನ ಜನರಿಗೆ ಸಹಾಯ ಮಾಡುವೆ. ಹಾಗೆಯೇ ಸುಪ್ರೀಂ ಕೋರ್ಟ್ ಕೂಡಾ ನನಗೆ ಸಂಪೂರ್ಣವಾಗಿ ಬಳ್ಳಾರಿಯಲ್ಲಿರಲು ಅವಕಾಶ ಮಾಡಿಕೊಟ್ಟಿದೆ. ಆದ್ದರಿಂದ ಬಳ್ಳಾರಿಯಲ್ಲಿದ್ದು ಪುನೀತ್ ರೀತಿಯಲ್ಲಿ ಜನ ಸೇವೆ ಮಾಡುತ್ತೇನೆ ಎಂದು ಹೇಳಿದ್ದಾರೆ.

Also Read  ಮಂಗಳೂರು: ಕಾರು ಚಲಾಯಿಸುತ್ತಿದ್ದ ವೇಳೆ ಚಾಲಕನಿಗೆ ಹೃದಯಾಘಾತ- ಮೃತ್ಯು..!

 

error: Content is protected !!
Scroll to Top