ಕಡಬ: ಎಸ್ಡಿಪಿಐ ಬೂತ್ ಮಟ್ಟದ ಪದಾಧಿಕಾರಿಗಳಿಗೆ ನಾಯಕತ್ವ ತರಬೇತಿ ಶಿಬಿರ

(ನ್ಯೂಸ್ ಕಡಬ) newskadaba.com ಕಡಬ, ನ. 08. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಡಬ ಬ್ಲಾಕ್ ಸಮಿತಿ ವತಿಯಿಂದ ಪಕ್ಷದ ಬೂತ್ ಮಟ್ಟದ ಪದಾಧಿಕಾರಿಗಳಿಗೆ ನಾಯಕತ್ವ ತರಬೇತಿ ಶಿಬಿರವು ಕೆ.ಎ ಹಾಲ್ ನಲ್ಲಿ ನಡೆಯಿತು.

ಎಸ್ಡಿಪಿಐ ರಾಜ್ಯ ಸಮಿತಿ ಸದಸ್ಯ ಫಯಾಜ್ ದೊಡ್ಡಮನೆ ಅವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, 2021-2024ರ ಅವಧಿಗೆ ಆಯ್ಕೆಯಾದ ಬೂತ್ ಸಮಿತಿ, ಗ್ರಾಮ ಸಮಿತಿ, ಪಟ್ಟಣ ಸಮಿತಿ ಹಾಗೂ ಬ್ಲಾಕ್ ಸಮಿತಿ ನಾಯಕರಿಗೆ ನಾಯಕತ್ವದ ತರಬೇತಿ ನೀಡಿದರು. ರಾಜ್ಯ ಹಾಗೂ ಜಿಲ್ಲಾ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ರಾಷ್ಟ್ರಾಧ್ಯಕ್ಷರ ಸಂದೇಶದ ವಿಡಿಯೋ ಮತ್ತು ದ.ಕ ಜಿಲ್ಲಾ ಡಾಕ್ಯುಮೆಂಟರಿ ವಿಡಿಯೋ ಪ್ರದರ್ಶನ ಮಾಡಲಾಯಿತು. ಇದೇ ವೇಳೆ ನೂತನ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಲಾಯಿ, ಜಿಲ್ಲಾ ಉಪಾಧ್ಯಕ್ಷ ವಿಕ್ಟರ್ ಮಾರ್ಟೀಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್, ಜಿಲ್ಲಾ ಜೊತೆ ಕಾರ್ಯದರ್ಶಿ ಶಾಕಿರ್ ಅಳಕೆಮಜಲು, ಜಿಲ್ಲಾ ಸಮಿತಿ ಸದಸ್ಯರಾದ ಪ್ರೇಮ ಮಲ್ಲೂರು, ಜಮಾಲ್ ಜೋಕಟ್ಟೆ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

Also Read  ಸವಣೂರು: ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ

error: Content is protected !!
Scroll to Top