ಕ್ಯಾಂಪಸ್ ಫ್ರಂಟ್ ಡೇ ಅಂಗವಾಗಿ ದ.ಕ ಜಿಲ್ಲೆಯಾದ್ಯಂತ ಧ್ವಜಾರೋಹಣ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 09. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ 12ನೇ ವರ್ಷದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಕ್ಯಾಂಪಸ್ ಫ್ರಂಟ್ ದ.ಕ ಜಿಲ್ಲಾದ್ಯಂತ ಪುತ್ತೂರು, ಬೆಳ್ತಂಗಡಿ, ಕಡಬ, ಸುಳ್ಯ, ವಿಟ್ಲ, ಬಂಟ್ವಾಳ, ಮಂಗಳೂರು ತಾಲೂಕಿನಲ್ಲಿ ಸುಮಾರು 60 ಸ್ಥಳಗಳಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ಸಂದೇಶ ಮಾತುಗಳನ್ನಾಡಿದ ಕ್ಯಾಂಪಸ್ ಫ್ರಂಟ್ ರಾಷ್ಟ್ರೀಯ ಕಾರ್ಯದರ್ಶಿ ಸ್ವದಕತ್ ಶಾರವರು ಕ್ಯಾಂಪಸ್ ಫ್ರಂಟ್ ಸ್ಥಾಪನೆಗೊಂಡು ಇಂದಿಗೆ 12 ವರ್ಷಗಳು ಪೂರ್ಣಗೊಳ್ಳುತ್ತಿದ್ದು, ಈ ಶುಭ ಸಂದರ್ಭವೂ ನಮ್ಮ ಸಂಘಟನೆಯ ಪ್ರಭಾವ ಮತ್ತು ಬೆಳವಣಿಗೆಯ ಕುರಿತು ಅರಿತಾಗ ತುಂಬಾ ಸಂತೋಷವಾಗುತ್ತದೆ ಮತ್ತು ಅದರ ಜೊತೆಗೆ ಮುಂದಿನ ಸವಾಲುಗಳನ್ನು ಎದುರಿಸುವ ಕುರಿತು ಹುಮ್ಮಸ್ಸು ತುಂಬುತ್ತದೆ. ವಿಶ್ವದಲ್ಲೇ ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವೆಂಬ ಖ್ಯಾತಿ ಪಡೆದ ಭಾರತದಲ್ಲಿ ಪ್ರಸ್ತುತ ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದೆ ಎಂಬ ಆತಂಕಕಾರಿ ಕೂಗುಗಳು, ಧ್ವನಿಗಳು ಮೊಳಗುತ್ತಿರುವುದಕ್ಕೆ ವಿಶ್ವವೇ ಸಾಕ್ಷಿಯಾಗಿದೆ. ದೇಶ ಮತ್ತು ರಾಜ್ಯವನ್ನು ಆಳುತ್ತಿರುವ ಸರಕಾರಗಳು ಸಂವಿಧಾನದ ಪ್ರತಿಜ್ಞೆಯೊಂದಿಗೆ ಅಧಿಕಾರ ವಹಿಸಿಕೊಂಡ ಬಳಿಕ ಅದೇ ಸಂವಿಧಾನವನ್ನು ಬುಡಮೇಲುಗೊಳಿಸುವ ಹುನ್ನಾರದಲ್ಲಿ ತೊಡಗಿರುವಾಗ, ಸಂವಿಧಾನವನ್ನು ಉಳಿಸಿದರೆ ಮಾತ್ರ, ದೇಶ ಉಳಿಯಬಲ್ಲದು ಎಂಬ ಆಲೋಚನೆಯೊಂದಿಗೆ ಸರಕಾರ ಜಾರಿಗೆ ತರುವ ಜನವಿರೋಧಿ ನೀತಿಗಳನ್ನು, ಸಂವಿಧಾನ ವಿರೋಧಿ ಕಾಯ್ದೆಗಳನ್ನು, ವಿದ್ಯಾರ್ಥಿ ವಿರೋಧಿ ತೀರ್ಮಾನಗಳ ವಿರುದ್ಧ ರಾಜಿ ರಹಿತ ಹೋರಾಟದೊಂದಿಗೆ ಕ್ಯಾಂಪಸ್ ಫ್ರಂಟ್ ಮುಂದೆ ಸಾಗುತ್ತಿದೆ ಎಂದರು.

Also Read  ತಾಲೂಕು ಆಯ್ಕೆ ಸಮಿತಿಯ ಬೇಜವಾಬ್ದಾರಿಗೆ ಬಲಿಪಶುವಾದ ಪುತ್ತೂರು ತಾಲೂಕು ಪ್ರಾಥಮಿಕ ಬಾಲಕರ ಕಬಡ್ಡಿ ತಂಡ

ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಉಪಾಧ್ಯಕ್ಷರಾದ ರೋಶನ್ ತುಮಕೂರು, ಕಾರ್ಯದರ್ಶಿಗಳಾದ ಸಾಧಿಕ್, ಅಲ್ತಾಫ್ ಹಾಗೂ ರಾಜ್ಯ ಕೋಶಾಧಿಕಾರಿ ಸವಾದ್ ಕಲ್ಲರ್ಪೆ ಮತ್ತು ರಾಜ್ಯ ಸಮಿತಿ ಸದಸ್ಯರಾದ ಫಹದ್, ಸಿರಾಜ್, ಮಸೂದ್, ಚಾಂದ್, ಝುಬೇರ್ ಜಿಲ್ಲಾ ಮಖಂಡರಾದ ತಾಜುದ್ದೀನ್, ಶಂಸು ವಿಟ್ಲ, ಶರ್ಫುಧ್ಧೀನ್, ಹಫೀಝ್, ಅಶ್ರಫ್, ಸರಫರಾಝ್, ಫಯಾಝ್, ಅಶ್ಫಾಕ್, ಐಮಾನ್, ಅನ್ಸಾರ್, ಮುಸ್ತಫಾ, ಯಾಸೀನ್ ಹಾಗೂ ರಿಝ್ವಾನ್ ಉಪಸ್ಥಿತರಿದ್ದರು.

Also Read  ಎಂಡಿಎಂಎ ಮಾದಕ ವಸ್ತು ಮಾರಾಟ - ಮಾದಕವಸ್ತು ಸಹಿತ ಆರೋಪಿಗಳು ಅಂದರ್

error: Content is protected !!
Scroll to Top