ಬೆಳ್ಳಾರೆ: ಯುವತಿಯೊಂದಿಗೆ‌ಅಸಭ್ಯ ವರ್ತನೆ ➤ ಆರೋಪಿಗೆ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ನ. 09. ಯುವಕನೋರ್ವ ಅಸಭ್ಯವಾಗಿ ವರ್ತಿಸಿದನೆಂದು ಯುವತಿಯೋರ್ವಳು ದೂರು ನೀಡಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಅಲೆಕ್ಕಾಡಿ ಎಂಬಲ್ಲಿ ನಡೆದಿದೆ.

ಆರೋಪಿ ನವಾಝ್ ಎಂಬಾತನನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿದ್ದಾರೆ‌. ಅಲೆಕ್ಕಾಡಿಯಲ್ಲಿ ಬಾಡಿಗೆ ರೂಮಿನಲ್ಲಿ ವಾಸವಾಗಿದ್ದ ನವಾಝ್ ಅದೇ ಕಟ್ಟಡದಲ್ಲಿ ಬಾಡಿಗೆ ರೂಮ್ ಮಾಡಿಕೊಂಡಿರುವ ಯುವತಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ದೂರು ನೀಡಿದ್ದಳು.

Scroll to Top