ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 09. ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನು ಸ್ವಾಗತಿಸಲು ವಿಮಾನ ನಿಲ್ದಾಣದಲ್ಲಿ ಭಾರೀ ಪ್ರಮಾಣದಲ್ಲಿ ಜನ ಸೇರಿದ್ದರು.

ಹರೇಕಳ ಹಾಜಬ್ಬ ಅವರಿಗೆ ಭಾರತ ಸರಕಾರವು ಸೋಮವಾರದಂದು ‘ಪದ್ಮಶ್ರೀ’ ಪ್ರಶಸ್ತಿ ಪ್ರದಾನಿಸಿ ಗೌರವಿಸಿತ್ತು. ಈ ಸಂದೃಭ ಹಾಜಬ್ಬ ಚಪ್ಪಲಿ ಹಾಕದೇ, ಸಾಂಪ್ರದಾಯಿಕ ಉಡುಪು ಶರ್ಟ್ ಹಾಗೂ ಪಂಚೆಯಲ್ಲಿ ತೆರಳಿ ಸರಳತೆ ಮೆರೆದಿದ್ದರು. ಕಿತ್ತಳೆ ವ್ಯಾಪಾರಿ ಹಾಜಬ್ಬ, ಕಿತ್ತು ತಿನ್ನುವ ಬಡತನದ ಮಧ್ಯೆಯೂ ಕೂಡಾ ಜೀವನವನ್ನು ಶಿಕ್ಷಣಕ್ಕಾಗಿ ಮುಡಿಪಾಗಿಟ್ಟು, ಹಲವು ಮಕ್ಕಳ ಬಾಳಿನಲ್ಲಿ ಶಿಕ್ಷಣದ ಬೆಳಕು ಚೆಲ್ಲಿದ್ದಕ್ಕೆ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಗಿದೆ.

Also Read  ಬೈಕ್ ಹಾಗೂ ಪಿಕಪ್ ವಾಹನದ ನಡುವೆ ಢಿಕ್ಕಿ ➤‌ ಸವಾರ ಮೃತ್ಯು

error: Content is protected !!
Scroll to Top