ಮಂಗಳೂರು: ಗೆಳೆಯರ ಜೊತೆ ವಿಹಾರಕ್ಕೆಂದು ಬಂದ ಬೆಂಗಳೂರಿನ ಯುವಕ ಸಮುದ್ರಪಾಲು



(ನ್ಯೂಸ್ ಕಡಬ) newskadaba.com ಮಂಗಳೂರು, ನ. 09. ಗೆಳೆಯರ ಜೊತೆ ವಿಹಾರಕ್ಕೆಂದು ಬಂದ ಯುವಕನೋರ್ವ ಸಮುದ್ರ ಪಾಲಾದ ಘಟನೆ ಪಣಂಬೂರು ಬೀಚ್ ನಲ್ಲಿ ನಡೆದಿದೆ.





ಮೃತ ಯುವಕನನ್ನು ಬೆಂಗಳೂರು ಮೂಲದ ದಿನೇಶ್ (20) ಎಂದು ಗುರುತಿಸಲಾಗಿದೆ. ಈತ ತನ್ನ ಸ್ನೇಹಿತರಾದ ದೀಪಕ್, ಶ್ರೀ ನಿವಾಸ, ಪ್ರಶಾಂತ್, ಸುನೀಲ್, ಸುದೀಪ್, ಪ್ರಜ್ವಲ್ ಹಾಗೂ ಸೀನಾ ಎಂಬವರೊಂದಿಗೆ ಬೆಂಗಳೂರಿನಿಂದ ಮಂಗಳೂರಿನ ಪಣಂಬೂರು ಬೀಚ್ ಗೆ ವಿಹಾರಕ್ಕೆಂದು ತೆರಳಿದ್ದರು. ಈ ಸಂದರ್ಭ ಸ್ನಾನಕ್ಕೆಂದು 8 ಮಂದಿ ನೀರಿಗಿಳಿದಿದ್ದು, ಬೃಹತ್ ಅಲೆಗೆ ಸಿಲುಕಿದ ದಿನೇಶ್ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ. ಈ ಸಂದರ್ಭದಲ್ಲಿ ಇತರರು ರಕ್ಷಣೆಗೆ ಪ್ರಯತ್ನಿಸಿದರೂ ಆತ ಸಮುದ್ರಪಾಲಾಗಿದ್ದಾನೆ ಎನ್ನಲಾಗಿದೆ. ಈ ಕುರಿತು ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






error: Content is protected !!
Scroll to Top