ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ. 09. ಕರ್ನಾಟಕ ಸರಕಾರದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ದೇವರಿಗೆ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ, ವ್ಯವಸ್ಥಾಪನಾ ಸಮಿತಿ ಸದಸ್ಯ ಪ್ರಸನ್ನ ದರ್ಬೆ, ಶ್ರೀ ವತ್ಸ, ಶೋಭಾ ಗಿರಿಧರ್, ಕಾರ್ಯ ನಿರ್ವಹಣಾಧಿಕಾರಿ ಡಾ. ನಿಂಗಯ್ಯ, ಸಹಾಯಕ ಕಾರ್ಯನಿರ್ವಹಣಾ ಅಧಿಕಾರಿ ಪುಷ್ಪಲತಾ, ಶಿಷ್ಟಾಚಾರ ವಿಭಾಗದವರು ಹಾಗೂ ಸ್ಥಳೀಯ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

Also Read  ಬೆಂಗಳೂರು: ಪರಿಷತ್ ನ ನಾಲ್ಕು ಕ್ಷೇತ್ರಗಳಿಗೆ ಇಂದು ಮತದಾನ

error: Content is protected !!
Scroll to Top