ಮಂಗಳೂರು ತಲುಪಿದ ಹರೇಕಳ ಹಾಜಬ್ಬ ➤ ಜಿಲ್ಲಾಧಿಕಾರಿ ಕಛೇರಿಯಲ್ಲಿ ಸನ್ಮಾನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 09. ನವದೆಹಲಿಯಲ್ಲಿ ಸೋಮವಾರದಂದು ರಾಷ್ಟ್ರಪತಿ ರಮಾನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿ, ಮಂಗಳವಾರದಂದು ಬೆಳಗ್ಗೆ ಮಂಗಳೂರಿಗೆ ಆಗಮಿಸಿದ ಹರೇಕಳ ಹಾಜಬ್ಬ ಅವರನ್ನು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸ್ವಾಗತಿಸಿ, ಸನ್ಮಾನಿಸಿದರು.

ಈ ಸಂದರ್ಭದಲ್ಲಿಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!
Scroll to Top