ಸುಬ್ರಹ್ಮಣ್ಯ: ಪೊಲೀಸ್ ಠಾಣಾ ಕಾಮಗಾರಿ ಶೀಘ್ರವೇ ಪ್ರಾರಂಭ ➤ ಗೃಹ ಸಚಿವ ಅರಗ ಜ್ಞಾನೇಂದ್ರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ. 09. ರಾಜ್ಯದಲ್ಲಿ ಪೊಲೀಸ್ ಇಲಾಖೆಯ ಬಲವರ್ಧಿನೆಗೆ 100 ಪೊಲೀಸ್ ಠಾಣೆಗಳ ಹೊಸ ಕಟ್ಟಡವನ್ನು ಸುಮಾರು 200 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಸಲಾಗುವುದು, ಹಾಗಯೇ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೂ ಒಂದು ಕೋಟಿ ರೂಪಾಯಿಗಳನ್ನು ಅನುದಾನ ಇಡಲಾಗಿದೆ. ಸದ್ಯದಲ್ಲೇ ಕಾಮಗಾರಿ ಪ್ರಾರಂಭಿಸಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.

ಸೋಮವಾರದಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಪತ್ರಕತ್ರರೊಂದಿಗೆ ಮಾತನಾಡಿ, ಪೊಲೀಸರಿಗೆ 20-25ರ ಗೃಹ ಯೋಜನೆಯಲ್ಲಿ 2025ನೇ ಇಸವಿಯವರೆಗೆ ಹತ್ತು ಸಾವಿರ ಮನೆಗಳ ನಿರ್ಮಾಣವಾಗಲಿದೆ. ಅಲ್ಲಿಗೆ ವಸತಿಗಳ ಸಮಸ್ಯೆ ನಿವಾರಣೆಯಾಗುತ್ತದೆ ಎಂದರು. ಇಲಾಖೆಯಲ್ಲಿ ವಾರ್ಷಿಕ ನಾಲ್ಕು ಸಾವಿರ ನೇಮಕಾತಿ ನಡೆಸಲಾಗುತ್ತಿದೆ. ಈಗ ಕೇವಲ ಹನ್ನೆರಡು ಸಾವಿರ ಹುದ್ದೆಗಳು ಖಾಲಿ ಇವೆ ಎಂದರು.

Also Read  ಆಟೋ ಚಾಲಕ ನಾಪತ್ತೆ: ಪ್ರಕರಣ ದಾಖಲು..!

error: Content is protected !!
Scroll to Top